ಮಹಿಳೆಯರಿಗೆ ಅರಿಶಿಣ-ಕುಂಕುಮ ಪ್ರಸಾದ

Fest
Published on
  • ವರಮಹಾಲಕ್ಷ್ಮೀ ಹಬ್ಬದಂದು ಮುಜರಾಯಿ ಇಲಾಖೆ ಉಪಕ್ರಮ

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದಂದು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಆಗಮಿಸುವ ಮಹಿಳೆಯರಿಗೆ ಕಳೆದ ವರ್ಷದಂತೆ ಈ ಬಾರಿಯೂ ಅರಿಶಿಣ, ಕುಂಕುಮ, ಹಸಿರು ಬಳೆ ಹಾಗೂ ಹೂವು ನೀಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಆಯಾ ದೇವಾಲಯಗಳ ವತಿಯಿಂದ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮವನ್ನು ಕಾಗದದ ಲಕೋಟೆಯಲ್ಲಿ ಹಾಕಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಬೇಕು. ಇದರ ಜತೆಗೆ ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ವಿತರಿಸಬೇಕು ಎಂದು ತಿಳಿಸಿದೆ.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಸಂಪ್ರದಾಯವನ್ನು ಕಾಂಗ್ರೆಸ್ ಸರ್ಕಾರವೂ ಮುಂದುವರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net