

ಹಾವೇರಿ: ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ಶೇ. 30ರಷ್ಟು ಹಣ ಮೀಸಲಿಡಲು ಹಾಗೂ ವಿದ್ಯಾಥಿರ್ಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾಥಿರ್ ಫೆಡರೇಶನ್ (ಎಸ್ಎಫ್ಐ) ವತಿಯಿಂದ ಇಲ್ಲಿಯ ಜಿಲ್ಲಾಡಳಿತ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.
ಸಂಟನೆಯ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಿಕ್ಷಣತಜ್ಞ ಕೊಠಾರಿ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಕನಿಷ್ಠ ಶೇ. 30 ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಸರ್ಕಾರಿ ಇಂಜಿನಿಯರಿಂಗ್, ಮೆಡಿಕಲ್, ಪ್ಯಾರಮೆಡಿಕಲ್, ನಸಿರ್ಂಗ್, ಹಾವೇರಿ ವಿಶ್ವವಿದ್ಯಾಲಯ ಉಳಿವಿಗಾಗಿ ಸೇರಿದಂತೆ ಶಿಗ್ಗಾಂವಿ ಜಾನಪದ ವಿವಿ, ಹನುಮನಮಟ್ಟಿ ಕೃಷಿ ವಿವಿಗಳು ಸೇರಿದಂತೆ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಾದ್ಯಂತ ಪ್ರತಿ ತಾಲೂಕಿಗೂ ಸರ್ಕಾರಿ ಡಿಪ್ಲೋಮಾ ಕಾಲೇಜು, ಸರ್ಕಾರಿ ಐಟಿಐ ಕಾಲೇಜು ಸರ್ಕಾರಿ ಜಿಟಿಟಿಸಿ ಕಾಲೇಜುಗಳನ್ನು ಮಂಜೂರು ಮಾಡಬೇಕು. ಸರ್ಕಾರಿ ಐಟಿಐ ಕಾಲೇಜಿಗೆ ಸ್ವಂತ ಕಟ್ಟಡ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಸರ್ಕಾರಿ ವಸತಿ ನಿಲಯಗಳನ್ನು ಬಲಪಡಿಸಬೇಕು. ಹೆಚ್ಚುವರಿ ಹಾಸ್ಟೆಲ್ ಮಂಜೂರು ಮಾಡಬೇಕು.
ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಹಾಗೂ ಉನ್ನತ ಶಿಕ್ಷಣದವರೆಗೂ(ಎಲ್.ಕೆ.ಜಿ ಯಿಂದ ಪಿಎಚ್.ಡಿವರೆಗೆ) ಎಲ್ಲ ವರ್ಗದ ವಿದ್ಯಾಥಿರ್ಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ರಾಜ್ಯದಲ್ಲಿರುವ ಸರ್ಕಾರಿ ಹಾಸ್ಟೆಲ್ ವಿದ್ಯಾಥಿರ್ಗಳಿಗೆ (ಪ್ರಸ್ತುತದಲ್ಲಿ ಮೆಟ್ರಿಕ್ ಪೂರ್ವ 1970 ರೂ. ಮತ್ತು ಮೆಟ್ರಿಕ್ ನಂತರದ ವಿದ್ಯಾಥಿರ್ಗಳಿಗೆ 1850 ರೂ. ಮಾಸಿಕವಾಗಿ ನಿಗದಿಯಾಗಿದೆ) ಇದನ್ನು 3500 ರೂ.ಗೆ ಹೆಚ್ಚಿಸಬೇಕು. ಮತ್ತು ಆರೋಗ್ಯ ಭದ್ರತೆ ಒದಗಿಸಬೇಕು.
ಹಾವೇರಿ ವಿವಿ ಸೇರಿದಂತೆ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪ ಸಮಿತಿ ತೀರ್ಮಾನ ಹಿಂಪಡೆದು. ಎಲ್ಲ ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆ ಮಾಡಿ ಬಲಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರಮುಖರಾದ ಸುರೇಶ ಹಂಡಿ, ಅಶ್ರಫ ನದಾಫ, ಚಂದ್ರಶೇಖರ ಗಿರೇಪ್ಪಗೌಡ್ರ, ಚನ್ನರಾಜಯ್ಯ ಎಚ್.ಎಂ., ಸಂದೀಪ ಅಣ್ಣಿಗೇರಿ, ಸಂಜಯ ಎಚ್, ಚೇತನ ಎಂ., ಸುನಿಲ ಪತ್ತಾರ, ಅಭಿಷೇಕ ಡಿ., ಉಮೇಶ ಮತ್ತಿತರರು ಪಾಲ್ಗೊಂಡಿದ್ದರು.