

ಸುಂಟಿಕೊಪ್ಪ: ಮಾದಾಪರ ಹೋಬಳಿಯಲ್ಲಿ ಸರ್ಕಾರದ ವಿಶೇಷ ಅನುದಾನದಲ್ಲಿ 44 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದೆಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.
ಮಾದಾಪುರ ಜಂಬೂರು ಬಾಣೆ, ಇಗೋಡ್ಲು, ಆಶ್ರಯ ಕಾಲನಿ ಸಂಪರ್ಕ ರಸ್ತೆಗೆ ಶಾಸಕರ ನಿಧಿಯಿಂದ 10 ಲಕ್ಷ ರೂ. ಯೋಜನೆಗೆ ಮಂಗಳವಾರ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು, ಮಾದಾಪುರ ವಿಭಾಗದ ಜನರ ಬೇಡಿಕೆಯಂತೆ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು. ಮುಖ್ಯಮಂತ್ರಿ ಅವರು ನನ್ನ ಕ್ಷೇತ್ರಕ್ಕೆ 19 ಕೋಟಿ ರೂ.ಗಳನ್ನು ಅಭಿವೃದ್ಧಿ ಕೆಲಸ ಕಾರ್ಯಕ್ಕೆ ಬಿಡುಗಡೆಗೊಳಿಸಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.
ಸೋಮವಾರಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ, ಮಾದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಮೇದೂರು ಹರೀಶ ಸುಬ್ಬಯ್ಯ, ಮಾದಾಪುರ ಬೂತ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್, ಜಂಬೂರು ಕಾಂಗ್ರೆಸ್ ಅಧ್ಯಕ್ಷ ಅಜೀಜ್, ರಿಯಾಜ್, ಮಾದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುರೇಶ್ ಬಾವೆ, ಜಂಬೂರು ವಿಭಾಗದ ಗ್ರಾಮ ಪಂಚಾಯಿತಿ ಸದಸ್ಯ ಪಿ.ಡಿ.ಅಂತೋಣಿ(ತಂಗಚ್ಚ), ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಗಣೇಶ ಉಪಸ್ಥಿತರಿದ್ದರು.