ವಿಶ್ವಕರ್ಮ ಯೋಜನೆಯಡಿ ವಿವಿಧ ತರಬೇತಿ

jss
ಶಿವಮೊಗ್ಗ ಜನಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಟೈಲರಿಂಗ್ ತರಬೇತಿ ಸಂದರ್ಭದಲ್ಲಿ ಕುಶಲಕರ್ಮಿಗಳೊಂದಿಗೆ ಎಸ್.ವೈ.ಅರುಣಾದೇವಿ ಇದ್ದರು.
Published on

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಯಡಿ ವಿವಿಧ ಬಗೆಯ 18 ತರಬೇತಿಗಳನ್ನು ನೀಡಲಾಗುತ್ತದೆ ಎಂದು ಜಿಪಂ ಗ್ರಾಮೀಣ ಕೈಗಾರಿಕೆ ವಿಭಾಗದ ಉಪನಿರ್ದೇಶಕ ರವೀಂದ್ರನಾಥ್ ತಿಳಿಸಿದರು.

ನಗರದ ಜನಶಿಕ್ಷಣ ಸಂಸ್ಥೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ ಟೈಲರಿಂಗ್ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಯಡಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದು. ತರಬೇತಿ ಪ್ರಮಾಣ ಪತ್ರ, 15 ಸಾವಿರ ರೂ. ಮೌಲ್ಯದ ಸಲಕರಣೆಗಳನ್ನು ನೀಡಲಾಗುತ್ತದೆ ಎಂದರು.

ತರಬೇತಿ ಪೂರ್ಣಗೊಳಿಸಿದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಮೂರು ಲಕ್ಷ ರೂ.ವರೆಗೆ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಒದಗಿಸಲಾಗುವುದು. ಇನ್ನೂ ಹೆಚ್ಚಿನ ಸಾಲದ ನೆರವು ಅಗತ್ಯವಿದ್ದರೆ ಪ್ರಧಾನಮಂತ್ರಿ ಉದ್ಯೋಗ ಸೃಜನೆ ಯೋಜನೆಯಡಿ 50 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜನ ಶಿಕ್ಷಣ ಸಂಸ್ಥೆ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಕೇಂದ್ರ ಸರ್ಕಾರದ ಈ ಯೋಜನೆಯನ್ನು ಕುಶಲಕರ್ಮಿಗಳು ಬಳಸಿಕೊಂಡು ಉದ್ಯಮಿಗಳಾಗಿ ರೂಪುಗೊಂಡು ದೇಶದ ಆರ್ಥಿಕ ಬೆಳವಣಿಗೆಗೆ ಸಹಕರಿಸಬೇಕು ಎಂದರು.

ಜನಶಿಕ್ಷಣ ಸಂಸ್ಥೆ ಕಾರ್ಯಕ್ರಮಾಧಿಕಾರಿ ಎಂ.ಸುಮನಾ ನಿರ್ವಹಿಸಿದರು. ಸಂಸ್ಥೆಯ ಸಿಬ್ಬಂದಿ, ಸಂಪನ್ಮೂಲ ವ್ಯಕ್ತಿಗಳು, ಕುಶಲಕರ್ಮಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net