ವೀರಭದ್ರೇಶ್ವರ ದೇವಸ್ಥಾನದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ನ. 28ರಂದು

je721538035802367-abc
Published on

ರಾಣೆಬೆನ್ನೂರ: ನಗರದ ಶ್ರೀ ವೀರಭದ್ರೇಶ್ವರ ಸಾಂಸ್ಕೃತಿಕ ಸೇವಾ ಸಮಿತಿ ಹಾಗೂ ಹಾವೇರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನ. 28ರಂದು ಸಂಜೆ 6ಕ್ಕೆ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಗುಗ್ಗುಳ ಹಾಗೂ ಕಾರ್ತಿಕೋತ್ಸವದ ಪ್ರಯುಕ್ತ ಕಲಾವಿದ ರುದ್ರೇಶ ಬಡಿಗೇರ ಹಾಗೂ ಯಶೋಧಾ ಗುಡಿಗುಡಿ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸುವರು. ವೀರಭದ್ರೇಶ್ವರ ಸಾಂಸ್ಕೃತಿಕ ಸೇವಾ ಸಮಿತಿ ಅಧ್ಯಕ್ಷ ಜಿ.ಬಿ. ಮಾಸಣಗಿ ಅಧ್ಯಕ್ಷತೆ ವಹಿಸುವರು.
ಮಾಜಿ ಶಾಸಕ ಅರುಣಕುಮಾರ ಪೂಜಾರ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ನಗರಸಭೆ ಸದಸ್ಯ ನಿಂಗರಾಜ ಕೋಡಿಹಳ್ಳಿ, ಮಾಜಿ ಸದಸ್ಯ ಮಂಜುನಾಥ ಗೌಡಶಿವಣ್ಣನವರ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net