ವೀರಭದ್ರೇಶ್ವರ ಜಯಂತೋತ್ಸವ, ಕಾಶಿ ಜಗದ್ಗುರುಗಳ ಇಷ್ಟಲಿಂಗ ಪೂಜೆ 9ಕ್ಕೆ

Veerashaiva Lingayat Organizational Forum
Published on

ಶಿವಮೊಗ್ಗ: ವೀರಶೈವ ಕಲ್ಯಾಣ ಮಂದಿರದ ಹಿಂಭಾಗದ ಚೌಕಿಮಠದ ಆವರಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸೆ.9ರಂದು ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಹಾಗೂ ಶ್ರೀ ಕಾಶಿ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ ಹೇಳಿದರು.

ನಾಲ್ಕು ವರ್ಷಗಳಿಂದ ನಿರಂತರವಾಗಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಬೆಳಗ್ಗೆ 7.30ಕ್ಕೆ ಕಾಶಿಪೀಠದ ಜಗದ್ಗುರು ಶ್ರೀ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬೆಳಗ್ಗೆ 11ಕ್ಕೆ ಧರ್ಮಸಭೆ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಬಿ.ಶಿವರಾಜ್ ಮಾತನಾಡಿ, ಧರ್ಮಸಭೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ಕಾಶಿ ಜಗದ್ಗುರು ಸಾನ್ನಿಧ್ಯ ವಹಿಸುವರು. ತೊಗರ್ಸಿ ಪಂಚವಣ್ಣಗಿ ಮಠದ ಶ್ರೀ ಚನ್ನವೀರ ದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಮಳಲಿಯ ಶ್ರೀ ರಂಭಾಪುರಿ ಶಾಖಾ ಮಹಾಸಂಸ್ಥಾನ ಮಠದ ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಕೋಣಂದೂರು ಬೃಹನ್ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ತಾವರೆಕೆರೆ ಶಿಲಾ ಮಠದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ ಪಾಲ್ಗೊಳ್ಳುವರು ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಸೇರಿದಂತೆ ಅನೇಕರು ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದ ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ತಿಳಿಸಿದರು.

ಉಪಾಧ್ಯಕ್ಷ ಕೆ.ಬಿ.ಉಮೇಶ್, ಉಮೇಶ್ ಹಿರೇಮಠ, ಪ್ರದೀಪ್ ಎಲಿ, ಮಹಿಳಾ ಘಟಕದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಗೌರಮ್ಮ ಷಡಾಕ್ಷರಿ, ಮಧ್ಯ ಕರ್ನಾಟಕದ ಸಂಚಾಲಕಿ ಲಲಿತಾ ಪ್ರಕಾಶ್, ಲೋಲಾಕ್ಷಿ ಪರಮೇಶ್ವರ್, ವೇದಿಕೆ ತಾಲೂಕು ಅಧ್ಯಕ್ಷ ಬಿ.ಜೆ.ಧನರಾಜ್, ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನಗರದ ಘಟಕದ ಉಪಾಧ್ಯಕ್ಷ ವಿಶ್ವನಾಥ ಹುಂಬಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net