ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ 23ರಂದು

Chennamma
Published on

ಧಾರವಾಡ: ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆಯ ಕುರಿತು ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಗೀತಾ ಸಿ.ಡಿ. ಮಾತನಾಡಿ, ಅ. 23ರಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಯಂತಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಕಿತ್ತೂರು ಚನ್ನಮ್ಮ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಕಾರ್ಯಕ್ರಮದ ರೂಪುರೇಷೆ ವಿವರಿಸಿದರು. ಪಾಲಿಕೆ ಸದಸ್ಯ ಶಂಭುಗೌಡ ಸಾಲಮನಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ, ಮುಖಂಡರಾದ ನಿಂಗಣ್ಣ ಕರಿಕಟ್ಟಿ, ಬಸವಂತ ತೋಟದ, ಮಡಿವಾಳಪ್ಪ ಶಿರಿಯಣ್ಣವರ, ಗೌರಮ್ಮ ಬಲೂಗಿ ಹಾಗೂ ಪಂಚಮಸಾಲಿ ಹಾಗೂ ಇತರ ಸಮುದಾಯಗಳ ಜನರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net