ಅಮೆರಿಕದ ಕ್ಯಾಪಿಟಲ್ ಹಿಲ್ ಕಟ್ಟಡದ ಮೇಲೆ ಮಾನಸಿಕ ಅಸ್ವಸ್ಥ ದಾಳಿ: ಒಬ್ಬ ಪೊಲೀಸ್ ಸಾವು

captil hill
Published on

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ನಗರದಲ್ಲಿರುವ ಯುಎಸ್ ಕ್ಯಾಪಿಟಲ್ ಹಿಲ್ ಕಟ್ಟಡದ ಆವರಣದಲ್ಲಿ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಕಾರ್​ ಹತ್ತಿಸಿದ್ದರ ಪರಿಣಾಮ ಒಬ್ಬ ಪೊಲೀಸ್ ಮೃತಪಟ್ಟು ಇನ್ನೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ನೋವಾ ಗ್ರೀನ್ ಎನ್ನುವನನ್ನು ಯುಎಸ್ ಕ್ಯಾಪಿಟಲ್ ಹಿಲ್ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿಗೆ ಭಯೋತ್ಪಾದಕರ ನಂಟಿನ ಬಗ್ಗೆ ತನಿಖೆ ನಡೆಯುತ್ತಿದೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲವಾದರೂ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ವ್ಯಕ್ತಿ ಲಾಕ್​ಡೌನ್ ಪರಿಣಾಮವಾಗಿ ಕೆಲಸ ಕಳೆದುಕೊಂಡು ಮಾನಸಿಕವಾಗಿ ಕುಗ್ಗಿದ್ದನು ಎಂಬುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ದಾಳಿ ನಡೆಸಿದಾಗ ವ್ಯಕ್ತಿ ಬಳಿ ಮಾರಕಾಸ್ತ್ರಗಳು ಸಹ ಸಿಕ್ಕಿವೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರು, ಇದೊಂದು ಹೃದಯ ವಿದ್ರಾವಕ ಘಟನೆ ಎಂದು ಹೇಳಿದ್ದಾರೆ. ಯುಎಸ್ ಕ್ಯಾಪಿಟಲ್ ಹಿಲ್ ಕಟ್ಟಡದಲ್ಲಿ ಅಮೆರಿಕದ ಶಾಸಕಾಂಗ ಕಾರ್ಯನಿರ್ವಹಿಸುತ್ತವೆ. ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಇದೇ ಕಟ್ಟಡದ ಮೇಲೆ ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net