

ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಗುರುವಾರ ಲಿಂಗೈಕ್ಯರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ (Sharanabasappa appa) ಅವರು ಕಳೆದ ತಿಂಗಳು ಜುಲೈ 26 ರಂದು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.14) ಲಿಂಗೈಕ್ಯರಾಗಿದ್ದಾರೆ. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.
ಡಾ ಶರಣಬಸಪ್ಪ ಅಪ್ಪ ಅವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.