7ನೇ ವೇತನ ಆಯೋಗದ ವರದಿ ಜಾರಿ ನೀಡಿದ ಸಿಎಂ, ಡಿಸಿಎಂಗೆ ಆ.17ಕ್ಕೆ ನಮ್ಮಭಿಮಾನದ ಸಮಾರಂಭ

Published on

ಬೆಂಗಳೂರು:
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೆ ನೀಡಿರುವ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಆ.17ರಂದು ಅರಮನೆ ಆವರಣ ತ್ರಿಪುರವಾಸಿನಿಯಲ್ಲಿ ನಮ್ಮಭಿಮಾನದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನೌಕರರ ಪರವಾಗಿ ಅಭಿನಂದಿಸಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಡಾ.ಸಿ.ಪಿ.ಜಾರ್, ಡಾ.ಎಂ.ಟಿ.ರೇಜು ಅವರನ್ನು ಆಹ್ವಾನಿಸಲಾಗಿದೆ ಎಂದರು.
ನಮ್ಮಭಿಮಾನದ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರ ನೌಕರರು ಭಾಗವಹಿಸುತ್ತಿದ್ದಾರೆ. ಅವರಿಗೆಲ್ಲ ಸರ್ಕಾರ ಒಒಡಿ ಸೌಲಭ್ಯದಡಿ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net