ಭಾರತ ವಿರುದ್ಧ ಟಿ20 ಸರಣಿಗೆ ಆಸೀಸ್ ತಂಡ ಪ್ರಕಟ: ಪ್ರಮುಖ ಆಟಗಾರರಿಗೆ ರೆಸ್ಟ್

New-Project-19-1
Published on

ಮೆಲ್ಬೋರ್ನ್: ಐಸಿಸಿ ಏಕದಿನ ವಿಶ್ವಕಪ್ ಬೆನ್ನಲ್ಲೇ ನಡೆಯಲಿರುವ ಆತಿಥೇಯ ಭಾರತ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ 15 ಆಟಗಾರರ ಆಸ್ಟ್ರೇಲಿಯಾ ತಂಡ ಶನಿವಾರ ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್-ಬ್ಯಾಟರ್ ಮ್ಯಾಥ್ಯೂ ವೇಡ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ಆಸೀಸ್ ಪರ ಕಣಕ್ಕಿಳಿದಿದ್ದ 35 ವರ್ಷದ ವೇಡ್ ಆಯ್ಕೆ ಅಚ್ಚರಿ ಎನಿಸಿದೆ. ನವೆಂಬರ್ 23ರಂದು ವಿಶಾಖಪಟ್ಟಣದಲ್ಲಿ ಮೊದಲ ಪಂದ್ಯ ನಡೆಯಲಿದೆ.

ಟಿ20 ತಂಡ: ಮ್ಯಾಥ್ಯೂ ವೇಡ್ (ನಾಯಕ), ಸ್ಟೀವನ್ ಸ್ಮಿತ್, ಸ್ಟೋಯಿನಿಸ್, ವಾರ್ನರ್, ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಟಿಮ್ ಡೇವಿಡ್, ಬೆಹ್ರೆನ್‌ಡಾರ್, ಸೀನ್ ಅಬೋಟ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ತನ್ವೀರ್ ಸಂಘ, ಆಡಂ ಜಂಪಾ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net