

Vice Presidential Election: ಇಂದು(ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಯ ಸಾಧಿಸಿದ್ದು, ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. 452 ಮತಗಳಿಂದ ರಾಧಾಕೃಷ್ಣನ್ ಗೆದ್ದಿದ್ದಾರೆ.
ಇಂದು ಸಂಜೆ 5 ಗಂಟೆಗೆ ಉಪರಾಷ್ಟ್ರಪತಿ ಚುನಾವಣೆಯ ಮತದಾನ ಮುಗಿದಿದ್ದು, ಸಂಜೆ 6 ಗಂಟೆಗೆ ಎಣಿಕೆ ಆರಂಭವಾಯಿತು. ಎನ್‌ಡಿಎ ಮೈತ್ರಿಕೂಟದಿಂದ ರಾಧಾಕೃಷ್ಣನ್ ಮತ್ತು ಇಂಡಿಯಾ ಮೈತ್ರಿಕೂಟದಿಂದ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅಖಾಡದಲ್ಲಿದ್ದರು. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಖರ್ ರಾಜೀನಾಮೆ ಕೊಟ್ಟ ಕಾರಣ ಈ ಚುನಾವಣೆ ಅನಿವಾರ್ಯವಾಯಿತು.
ದೆಹಲಿಯ ಹೊಸ ಸಂಸತ್ ಕಟ್ಟಡದಲ್ಲಿ ಸ್ಥಾಪಿಸಲಾದ 'ಎಫ್-101 ವಸುಧಾ' ಮತಗಟ್ಟೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಮತದಾನ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ನಂತರದಲ್ಲಿ ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಹಾಕಿದರು.(ಏಜೆನ್ಸೀಸ್)