VIDEO | ಜೀವಂತ ನವಿಲಿಗೆ ಚಿತ್ರಹಿಂಸೆ; ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು

VIral Video
Published on

ಮಧ್ಯಪ್ರದೇಶ: ಯುವಕನೊಬ್ಬ ಜೀವಂತ ನವಿಲನ್ನು ಹಿಡಿದುಕೊಂಡು, ಅದರ ಗರಿಗಳನ್ನು ಕಿತ್ತೆಸೆದು ಚಿತ್ರಹಿಂಸೆ ಕೊಡುತ್ತಿರುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದ್ದು, ಅತುಲ್ ಎಂಬಾತ ಆರೋಪಿ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಯುವಕ ಜೀವಂತ ನವಿಲಿನ ಗರಿಗಳನ್ನು ಅಮಾನುಷವಾಗಿ ಕಿತ್ತೆಸೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ವೇಳೆ ಯುವಕನ ಪಕ್ಕದಲ್ಲಿ ಯುವತಿಯೊಬ್ಬಳು ಇರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಈ ಬಗ್ಗೆ ಅರಣ್ಯಾಧಿಕಾರಿ ಗೌರವ್ ಶರ್ಮಾ ಪ್ರತಿಕ್ರಿಯಿಸಿದ್ದು, ವೈರಲ್ ಆಗಿರುವ ವಿಡಿಯೋದಲ್ಲಿ ಕಂಡು ಬಂದಿರುವ ಬೈಕ್ ನಂಬರ್ ಆಧರಿಸಿ ತಪ್ಪಿತಸ್ಥ ಯುವಕ ಯಾರೆಂಬುದನ್ನು ಗುರುತಿಸಲಾಗಿದೆ. ಯುವಕನನ್ನು ವಶಕ್ಕೆ ಪಡೆಯಲೆಂದು ಪೊಲೀಸರು ಹೋದಾಗ ಆತ ಆತನ ಮನೆಯಲ್ಲಿರಲಿಲ್ಲ. ಸದ್ಯದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಯುವಕನ ಕೃತ್ಯದ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಪ್ರಾಣಿ-ಪಕ್ಷಗಳನ್ನು ಹಿಂಸಿಸುವುದು ಕಾನೂನು ಬಾಹಿರವಾಗಿದೆ. ತಪ್ಪಿತಸ್ಥ ಯುವಕನಿಗೆ ತಕ್ಕ ಶಿಕ್ಷೆ ಆಗಬೇಕು. ಕೂಡಲೇ ಆತನನ್ನು ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಯುವಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net