VIDEO| ಮದ್ಯದ ಪ್ಯಾಕೆಟ್​ಗಳನ್ನ ನಡುರಸ್ತೇಲಿ ಚೆಲ್ಲಿ ನಾಶಪಡಿಸಿದ ಗ್ರಾಮಸ್ಥರು

1186709
Published on

ಹಾಸನ: ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟದಿಂದ ರೋಸಿಹೋಗಿದ್ದ ಗ್ರಾಮಸ್ಥರು, ಅಧಿಕಾರಿಗಳು ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಸ್ವತಃ ತಾವೇ ಮದ್ಯದ ಪ್ಯಾಕೆಟ್​ಗಳನ್ನು ವಶಪಡಿಸಿಕೊಂಡು ರಸ್ತೆಯಲ್ಲಿ ಸುರಿದು ನಾಶಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ತಾಲೂಕಿನ ಮಳಲಿ‌ ಗ್ರಾ‌ಮದಲ್ಲಿ ಈ ಘಟನೆ ನಡೆದಿದೆ. ಒಂದೇ ಗ್ರಾಮದ ಸುಮಾರು 40 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ವ್ಯಸನಿಗಳು ಗ್ರಾಮದಲ್ಲಿ ಎಲ್ಲೆಂದರಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನ ಆಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲ ಸೇರಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಹೋರಾಟ ಮಾಡಿದ್ದಾರೆ. ಮದ್ಯ ಮಾರುತ್ತಿದ್ದವರ ಮನೆಗಳಿಗೆ ನುಗ್ಗಿ ಮದ್ಯ ಪ್ಯಾಕೆಟ್​ಗಳನ್ನು ವಶಕ್ಕೆ ಪಡೆದು ತಂದು, ಗ್ರಾಮದ ರಸ್ತೆ ಮಧ್ಯದಲ್ಲಿ ಸುರಿದು ಕಾಲಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net