ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ ಕೊಡಿಸಲು ನಮ್ಮನ್ನು ವಿಧಾನಸೌಧಕ್ಕೆ ಜನ ಕಳುಹಿಸಿದ್ದಾರೆ: CM Siddaramaiah

dk - 2025-04-06T200637.627
Published on

ಬೆಂಗಳೂರು : ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ನುಡಿದರು.

ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದರು.

ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು ಎಂದರು.

ಜನರ ಕೆಲಸ ಸರಿಯಾಗಿ ಮಾಡಲು ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ. ಈ ಉದ್ದೇಶಕ್ಕಾಗಿ ವಿಧಾನಸೌಧ ಕಟ್ಟಿಸಲಾಗಿದೆ. ಈ ಉದ್ದೇಶ ಈಡೇರಿಸಿ‌ ಜನರ ಸಮಸ್ಯೆ ಬಗೆಹರಿಸುವ ಶಕ್ತಿ ನಮಗೆ ಬರಲಿ, ರಾಜ್ಯದ ಜನತೆಗೂ ಆರ್ಥಿಕ ಶಕ್ತಿ ತರಲು ಯತ್ನಿಸೋಣ ಎಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net