ವಿಜಯವಾಣಿ ವಿದ್ಯಾರ್ಥಿ ಮಿತ್ರ ಸಂಚಿಕೆ ವಿತರಣೆ

20tnpnewsfile01
Published on

ತಿ.ನರಸೀಪುರ: ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ. ಪ್ರದೀಪ್ ಹೇಳಿದರು. ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ವಿಜಯವಾಣಿ ಪತ್ರಿಕೆಯ ವಿದ್ಯಾರ್ಥಿ ಮಿತ್ರ ಸಂಚಿಕೆ ವಿತರಿಸಿ ಅವರು ಮಾತನಾಡಿದರು. ಶಿಕ್ಷಕರು ಮಾಡುವ ಪಾಠ, ಪ್ರವಚನಗಳಿಂದ ಮಕ್ಕಳು ವಿದ್ಯೆ ಗಳಿಸಬೇಕು. ಇದರೊಂದಿಗೆ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನೂ ಓದಿ, ಪ್ರಚಲಿತ ವಿದ್ಯಮಾನಗಳನ್ನು ಅರ್ಥ ಮಾಡಿಕೊಂಡು, ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಬೇಕು. ಇದರಿಂದ ಉನ್ನತ ಹುದ್ದೆ ಪಡೆದು ಸಮಾಜ ಸೇವೆ ಮಾಡಲು ಅಣಿಯಾಗಬಹುದು ಎಂದರು.
ಮೊಬೈಲ್ ಗೀಳು ಬೇಡ:ಪ್ರತಿದಿನ ಒಂದು ಗಂಟೆ ಕಾಲ ಮಕ್ಕಳು ಪತ್ರಿಕೆ ಓದಲು ಸಮಯ ಮೀಸಲಿಡಬೇಕು. ಮೊಬೈಲ್ ಫೋನ್ ಗೀಳನ್ನು ಅಂಟಿಸಿಕೊಳ್ಳಬಾರದು ಎಂದು ಡಾ. ಪ್ರದೀಪ್ ಸಲಹೆ ಸಲಹೆ ನೀಡಿದರು. ಮುಖ್ಯ ಶಿಕ್ಷಕ ಮಹೇಶ್, ವಿದ್ಯೋದಯ ಶಿಕ್ಷಣ ಸಂಸ್ಥೆ ಉಪನ್ಯಾಸಕ ಕುಮಾರಸ್ವಾಮಿ, ಉದ್ಯಮಿ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net