

ಆರ್ಡಿ: ಆರ್ಡಿ, ಬೆಳ್ವೆ, ಗೋಳಿಯಂಗಡಿ ಲಯನ್ಸ್ ಕ್ಲಬ್ ಸಾಮಾಜಿಕ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡುವುದರೊಂದಿಗೆ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಆರ್ಡಿ, ಬೆಳ್ವೆ, ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಹೇಳಿದರು.
ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಆರ್ಡಿ, ಬೆಳ್ವೆ, ಗೋಳಿಯಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಯುವಶಕ್ತಿ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆ ಮಂಗಳವಾರ ಉಚಿತವಾಗಿ ವಿತರಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಸ್ಥಾಪಾಕಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ, ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ, ಮುಸ್ತಾಕ್ ಅಹಮ್ಮದ್ ಬೆಳ್ವೆ, ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಜತೆ ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ, ಪತ್ರಕರ್ತ ಕೆ.ಸಂಜೀವ ಆರ್ಡಿ, ಪ್ರಭಾರ ಮುಖ್ಯ ಶಿಕ್ಷಕ ಪ್ರಕಾಶ ಭಟ್, ಶಿಕ್ಷಕರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕ ಪ್ರಕಾಶ ಭಟ್ ಸ್ವಾಗತಿಸಿದರು. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಅಂಕ ಪಡೆಯಲು ಹೆಚ್ಚಿನ ಸೌಲಭ್ಯ ನೀಡಿದಾಗ ಸಾಧ್ಯ. ಲಯನ್ಸ್ ಕ್ಲಬ್ ವತಿಯಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಹಕರಿಸಲಾಗುತ್ತಿದೆೆ. ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದು ಉತ್ತಮ ಫಲಿತಾಂಶ ಗಳಿಸಲು ಅನುಕೂಲವಾಗುವಂತೆ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆ ಉಚಿತವಾಗಿ ನೀಡಿ ಪ್ರೋತ್ಸಾಹಿಸಲಾಗುತ್ತಿದೆ.-ಬಿ.ರಾಜೇಂದ್ರ ಕಿಣಿ ಬೆಳ್ವೆ ಲಯನ್ಸ್ ಕ್ಲಬ್, ಆರ್ಡಿ, ಬೆಳ್ವೆ, ಗೋಳಿಯಂಗಡಿ ಸ್ಥಾಪಾಕಧ್ಯಕ್ಷ