

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಡೌನ್‌ಲೋಡ್ ಮಾಡಿಕೊಂಡು ವಾಟ್ಸ್‌ಆ್ಯಪ್‌ನಲ್ಲಿ ಶೇರ್ ಮಾಡುತ್ತಿದ್ದ ಆರೋಪಿಯನ್ನು ಪೂರ್ವ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ ಬಂಧಿತ.
ಕೆಲ ವರ್ಷಗಳ ಹಿಂದೆ ನೌಕರಿ ಅರಸಿ ನಗರಕ್ಕೆ ಬಂದಿದ್ದ ನೂರ್ ಇಸ್ಲಾಂ, ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಪೋರ್ನೋಗ್ರಫಿ ವೆಬ್‌ಸೈಟ್‌ಗಳಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ೆಟೋಗಳನ್ನು ನೋಡುತ್ತಿದ್ದ.
ಜತೆಗೆ ಡೌನ್‌ಲೋಡ್ ಮಾಡಿಕೊಂಡು ವಾಟ್ಸ್‌ಆ್ಯಪ್‌ನಲ್ಲಿ ಸ್ನೇಹಿತರಿಗೆ ಮತ್ತು ಗ್ರೂಪ್‌ಗಳಿಗೆ ಶೇರ್ ಮಾಡಿ ವಿಕೃತಿ ಮೆರೆಯುತ್ತಿದ್ದ. ಈ ಬಗ್ಗೆ ಗೂಗಲ್‌ನಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿತ್ತು. ಆನಂತರ ಕೇಂದ್ರದಿಂದ ಆರೋಪಿಯ ಮಾಹಿತಿ ಸಮೇತ ದೂರು ಬಂದಿದ್ದು, ಇದರ ಮೇರೆಗೆ ಕಾರ್ಯಾಚರಣೆ ನಡೆಸಿ ನೂರ್ ಇಸ್ಲಾಂನನ್ನು ಬಂಧಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.