ನ್ಯೂ ಇಯರ್ ಸ್ವಾಗತಿಸಿದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಮತ್ತೆ ಸುದ್ದಿಯಾಯ್ತು ಇವರಿಬ್ಬರ ಡೇಟಿಂಗ್ ಊಹಾಪೋಹ!

Rashimka Mandanna
Published on

ಬೆಂಗಳೂರು: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಾಗಿದ್ದಾರೆ. ಇವರಿಬ್ಬರು ಡೇಟಿಂಗ್​ನಲ್ಲಿದ್ದಾರೆ ಎಂಬ ಮಾತುಗಳು ಆಗಾಗಾ ಕೇಳಿ ಬರುತ್ತವೆ. ಇದೀಗ ಇವರಿಬ್ಬರು ತಮ್ಮ ಇನ್ಸ್​​ಟಾಗ್ರಾಂನಲ್ಲಿ ಫೋಟೋವೊಂದನ್ನು ಪೋಸ್ಟ್ ಮಾಡಿ ಹೊಸ ವರ್ಷವನ್ನು ಸ್ವಾಗತಿಸಿಕೊಂಡಿದ್ದಾರೆ. ಈ ಫೋಟೋ ನೋಡಿದ ಅವರ ಅಭಿಮಾನಿಗಳು ಮತ್ತೆ ಡೇಟಿಂಗ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ವಿಜಯ್ ದೇವರಕೊಂಡ ಸಮುದ್ರ ತೀರದಲ್ಲಿರುವ ರೆಸಾರ್ಟ್​ವೊಂದರ ಸ್ವಿಮ್ಮಿಂಗ್​ ಫೂಲ್​ನಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ನಗು, ಅಳು, ಗೆಲವು, ಗುರಿ ಬೆನ್ನಟ್ಟಿದ್ದು ಹಾಗೂ ಕೆಲವು ಕ್ಷಣಗಳನ್ನು ಕಳೆದುಕೊಂಡ ವರ್ಷ ಇದು. ಹೀಗಿದ್ದರೂ ಹೊಸ ವರ್ಷವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಬೇಕು. ಇದೇ ಜೀವನ. ನನ್ನ ಪ್ರೀತಿ ಪಾತ್ರರಿಗೆ ಹೊಸ ವರ್ಷದ ಶುಭಾಶಯಗಳು ಎಂದು ವಿಜಯ್ ದೇವರಕೊಂಡ ಬರೆದಿದ್ದಾರೆ.

ರಶ್ಮಿಕಾ ಮಂದಣ್ಣ ಸ್ವಿಮ್ಮಿಂಗ್ ಫೂಲ್ ಬಳಿ ಮಲಗಿಕೊಂಡಿರುವ ಫೋಟೋ ಅಪ್ಲೋಡ್ ಮಾಡಿ 'ಹಲೋ 2023' ಎಂದು ಬರೆದುಕೊಂಡಿದ್ದಾರೆ.

ಇವರಿಬ್ಬರ ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಹೊಸ ವರ್ಷವನ್ನು ಸಂಭ್ರಮಿಸಲು ಒಟ್ಟಾಗಿ ಹೊರದೇಶಕ್ಕೆ ತೆರಳಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಈ ಹಿಂದೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಟ್ಟಾಗಿ ಮಾಲ್ಡೀವ್ಸ್​ಗೆ ತೆರಳಿದ್ದಾರೆ ಎಂಬ ಊಹೆ ಮೂಡಿತ್ತು. ಇದಕ್ಕೆ ಪೂರಕವಾಗಿ ಒಂದಿಷ್ಟು ಫೋಟೋಗಳು ಕೂಡಾ ವೈರಲ್ ಆಗಿತ್ತು. ಆದರೆ ಎಲ್ಲಿಯೂ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದೀಗ ಹೊಸ ವರ್ಷದಂದು ಇವರಿಬ್ಬರು ಅಪ್ಲೋಡ್ ಮಾಡಿರುವ ಫೋಟೋ ನೋಡಿ, ಅಂದು ರಶ್ಮಿಕಾ-ವಿಜಯ್ ಜೋಡಿ ಒಟ್ಟಿಗೆ ಮಾಲ್ಡೀವ್ಸ್​ಗೆ ತೆರಳಿದ್ದರು ಎಂದು ಜನರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net