ʼಖುಷಿʼ ಸಿನಿಮಾ ರಿಲೀಸ್‌ಗೆ ದಿನಗಣನೆ..! ಸೆಪ್ಟಂಬರ್ 1ಕ್ಕೆ ಚಿತ್ರ ಬಿಡುಗಡೆ

vs mix
Published on

ಸೆಪ್ಟಂಬರ್ 1ಕ್ಕೆ ಖುಷಿ ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೇಲರ್ ಹಾಗೂ ಹಾಡುಗಳಿಗೆ ಭರಪೂರ ಮೆಚ್ಚುಗೆ ಸಿಕ್ಕಿದೆ. ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.


ನಾಗಚೈತನ್ಯ ನಟಿಸಿದ್ದ 'ಮಜಿಲಿ' ಸಿನಿಮಾದ ನಿರ್ದೇಶಕ ಶಿವ ನಿರ್ವಾಣ ಆಕ್ಷನ್ ಕಟ್ ಹೇಳಿದ್ದು, 'ಖುಷಿ' ಚಿತ್ರ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ರಿಲೀಸ್ ಆಗಲಿದೆ. ಮೈತ್ರಿ ಮೂವಿ ಬ್ಯಾನರ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಾಗಿದೆ.


ಹೇಷಾಂ ಅಬ್ದುಲ್ ವಹಾಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ. ಸಾಲು ಸಾಲು ಸೋಲು ಕಂಡಿರುವ ವಿಜಯ್ ದೇವರಕೊಂಡಗೆ ಖುಷಿ ಸಕ್ಸಸ್ ಕೊಡಲಿದೆ ಎಂಬ ನಿರೀಕ್ಷೆ ಹೆಚ್ಚಿಸಿದೆ.


ಮೊದಲ ಬಾರಿಗೆ ಜೋಡಿಯಾಗಿ ನಟಿಸಿರುವ ವಿಜಯ್ ದೇವರಕೊಂಡ, ಸಮಂತಾರನ್ನ ನೋಡಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ರಿವೀಲ್ ಆಗಿರುವ ಝಲಕ್‌ನಿಂದ ಈ ಜೋಡಿ ಮೋಡಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net