

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಅಧ್ಯಕ್ಷೆಯಾಗಿ ವಿಜಯ ಕಿಶೋರ್ ರಹತ್ಕರ್ ಅವರನ್ನು ನೇಮಕ ಮಾಡಲಾಗಿದೆ. ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಈ ಸಂಬಂಧ ಆದೇಶವನ್ನು ಹೊರಡಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗ ಕಾಯಿದೆ, 1990ರ ಸೆಕ್ಷನ್ 3ರ ಅಡಿಯಲ್ಲಿ ಮಾಡಲಾದ ನೇಮಕಾತಿಯು ವಿಜಯ ಕಿಶೋರ್ ರಹತ್ಕರ್ ಅವರನ್ನು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನಾಮನಿರ್ದೇಶನಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ವಿಜಯ ಕಿಶೋರ್ ರಹತ್ಕರ್ ಅವರ ನೇಮಕದ ಜತೆಗೆ ಸರ್ಕಾರವು ಎನ್ಸಿಡಬ್ಲ್ಯುಗೆ ಹೊಸ ಸದಸ್ಯರನ್ನು ಹೆಸರಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಧಿಸೂಚನೆಯ ಪ್ರಕಾರ ಡಾ.ಅರ್ಚನಾ ಮಜುಂದಾರ್ ಅವರನ್ನು ಮೂರು ವರ್ಷಗಳ ಅವಧಿಗೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯರಾಗಿ ಅಧಿಕೃತವಾಗಿ ನೇಮಿಸಲಾಗಿದೆ.(ಏಜೆನ್ಸೀಸ್)