

ಬೆಂಗಳೂರು: ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿಯೊರ್ವನ ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪತಿ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೋ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್‌ಫಾಲೋ ಮಾಡಿದ್ದರು. ಆದರೆ ಈ ಎಲ್ಲಾ ವಿಚಾರಗಳಿಂದ ಮನನೊಂದು ದರ್ಶನ್ ಅವರ ಪತ್ನಿ ಇಂದು ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ತುಂಬಾ ಬೇಸರವಾಗಿದ್ದರು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್‌ಸ್ಟಾ ಖಾತೆಯನ್ನು ಡಿ- ಆಕ್ಟಿವೇಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಹೆಸರು ಕೇಳಿ ಬರುತ್ತಿದ್ದಂತೆ ನಿನ್ನೆ ಇನ್‌ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಅನ್‌ಫಾಲೋ ಮಾಡಿದ್ದರು. ಅಲ್ಲದೇ ದರ್ಶನ್ ಫ್ಯಾನ್ ಪೇಜ್ ಅನ್ನು ಅನ್‌ಫಾಲೋ ಮಾಡಿ ಇನ್‌ಸ್ಟಾಗೆ ಇದ್ದ ಡಿಪಿ ಫೋಟೋವನ್ನು ತೆಗೆದು ಹಾಕಿದ್ದರು. ಇದರಿಂದ ಇನ್‌ಸ್ಟಾ ಖಾತೆಯ ಡಿಪಿ ಬ್ಲಾಂಕ್‌ನಲ್ಲಿತ್ತು. ಸದ್ಯ ಈ ಎಲ್ಲದರ ಬೆನ್ನಲ್ಲೇ ಇದೀಗ ತಮ್ಮ ಇನ್ ಸ್ನಾ ಖಾತೆಯನ್ನು ವಿಜಯಲಕ್ಷ್ಮಿ ಅವರು ಡಿ-ಆ್ಯಕ್ಟಿವೇಟ್ ಮಾಡಿದ್ದಾರೆ.
ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದರ್ಶನ್ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ.
ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್‌ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದರು. ನಿನ್ನೆ ಇನ್ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದರು. ಈಗ ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ್ದು ಚರ್ಚೆ ನಡೆಯುತ್ತಿದೆ.