ರೇಣುಕಸ್ವಾಮಿ ಹತ್ಯೆ ಕೇಸ್​; ಮೊದಲ ಬಾರಿಗೆ ಪ್ರತಿಕ್ರಿಯಿಸಿದ ದರ್ಶನ್​ ಪತ್ನಿ ವಿಜಯಲಕ್ಷ್ಮೀ

Vijayalakshmi Darshan
Published on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಸೇರಿದಂತೆ 19 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ಮುಂದುವರೆಸಿದ್ದು ತನಿಖೆ ಮುಂದುವರೆದಂತೆ ಹೊಸ ಹೊಸ ಹೆಸರು ಹಾಗೂ ವಿಚಾರಗಳು ಹೊರಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಿಜಯಲಕ್ಷ್ಮೀ ದರ್ಶನ್​, ಎಲ್ಲಕ್ಕಿಂತ ಮೊದಲು, ಮೃತ ಶ್ರೀ ರೇಣುಕಾ ಸ್ವಾಮಿ ಕುಟುಂಬದವರಿಗೆ ನನ್ನ ಸಂತಾಪಗಳು. ದರ್ಶನ್​ ಹಾಗೂ ಅವರ ಕುಟುಂಬದವರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸುಳ್ಳು ಸುದ್ದಿ ಹರಡದಂತೆ ಅವರು ಕೋರ್ಟ್​ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಬರೆದುಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ದರ್ಶನ್​, ನಾನು ಹಾಗೂ ನನ್ನ ಮಗ ದರ್ಶನ್​ ಅವರ ಎಲ್ಲಾ ಸ್ನೇಹಿತರು ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ತಂದಿದೆ. ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಬೇಕು ಎಂದು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ. ಚಾಮುಂಡೇಶ್ವರಿ ತಾಯಿ ಬಗ್ಗೆ ಮತ್ತು ನಮ್ಮ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಕ್ಕೆ ಜಯ ಸಿಗಲಿ. ಸತ್ಯಮೇವ ಜಯತೆ ಎಂದು ಬರೆದುಕೊಂಡಿದ್ದಾರೆ.

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ ಕುರಿತಂತೆ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಪೊಲೀಸರು ಈಗಾಗಲೇ ಅನೇಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net