

ಬೆಂಗಳೂರು: ಸ್ನೇಹಿತೆ ಪವಿತ್ರಾಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 7 ಮಂದಿ ಸೇರಿ ಚಿತ್ರದುರ್ಗದ ನಿವಾಸಿಯಾಗಿರುವ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಜಾಮೀನು ರದ್ದಾಗಿ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಈ ಸಂದರ್ಭದಲ್ಲಿ ಇತ್ತ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ತನ್ನ ಗಂಡನ ಜೊತೆಗಿನ ಥೈಲ್ಯಾಂಡ್ ಫೋಟೊಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಜುಲೈ ತಿಂಗಳಲ್ಲಿ ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ದರ್ಶನ್ ಥೈಯ್ಲೆಂಡ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಜೊತೆ ಪ್ರವಾಸವನ್ನೂ ಸಹ ಕೈಗೊಂಡಿದ್ದರು. ಆ ವೇಳೆ ತೆಗೆಸಿಕೊಂಡಿದ್ದಾ ಫೋಟೋವನ್ನು ಪತ್ನಿ ವಿಜಯಲಕ್ಷ್ಮಿ ಇದೀಗ ಶೇರ್ ಮಾಡಿದ್ದು, ಪತಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವ ಸಂದೇಶ ರವಾನಿಸಿರುವ ಹಾಗೆ ಕಾಣುತ್ತಿದೆ.
(ಏಜೆನ್ಸೀಸ್)
ಜೈಲಿಗೆ ಹೋಗುವುದಕ್ಕೂ ಮುನ್ನ ದರ್ಶನ್ ‘ದಿ ಡಿವಿಲ್’ ಚಿತ್ರದ ಶೂಟಿಂಗ್ ಮುಗಿಸಿ ಹೋಗಿದ್ದಾರೆ. ಇನ್ನೇನೊ ಸಿನಿಮಾದ ಪ್ರಚಾರ ಶುರುಮಾಡಬೇಕು ಅನ್ನುವಷ್ಟರಲ್ಲಿ ಅವರ ಜಾಮೀನು ರದ್ದಾಗಿ, ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಯ್ತು. ಈ ಬೆನ್ನಲ್ಲೇ ದರ್ಶನ್ ಪರವಾಗಿ ಪತ್ನಿ ವಿಜಯಲಕ್ಷ್ಮಿ ‘ದಿ ಡೆವಿಲ್’ ಸಿನಿಮಾದ ಪ್ರಮೋಷನ್ ಬಗ್ಗೆ ಅಪ್ಡೇಟ್ಸ್ ನೀಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಗೆ ಯಾವುದೇ ತೊಂದರೆ ಆಗದಂತೆ ಕೆಲಸ ಮುಂದುವರಿಸಲು ದರ್ಶನ್ ತಿಳಿಸಿದ್ದು, ಈ ಹಿನ್ನೆಲೆ ಪತ್ನಿಯೇ ಚಿತ್ರದ ಪ್ರಮುಖ ಉಸ್ತುವಾರಿಯಾಗಿ ಕೆಲಸ ಆರಂಭಿಸಿದ್ದಾರೆ.