ದೇವರ ಮೊರೆ ಹೋದ ವಿಜಯಲಕ್ಷ್ಮಿ

Darshan Renukaswamy
Published on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ನನ್ನು ಜೈಲಿನಿಂದ ಹೊರ ತರಲು ಪತ್ನಿ ವಿಜಯಲಕ್ಷ್ಮಿ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಈ ಮಧ್ಯೆ ತಮ್ಮ ಪತಿ ದರ್ಶನ್‌ಗಾಗಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ.
ಭಾನುವಾರ ಬೆಳಗ್ಗೆ ಗವಿಪುರ ಗುಟ್ಟಹಳ್ಳಿಯಲ್ಲಿರುವ ಬಂಡೆ ಮಕಾಳಮ್ಮನ ಸನ್ನಿಧಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಏಕಾಂಗಿಯಾಗಿ ಆಗಮಿಸಿದ್ದ ವಿಜಯಲಕ್ಷ್ಮಿ ತಮ್ಮ ಪತಿಯನ್ನು ಈ ಸಂಕಷ್ಟದಿಂದ ಪಾರು ಮಾಡುವಂತೆ ಬೇಡಿಕೊಂಡಿದ್ದಾರೆ. ಕಾನೂನು ಹೋರಾಟ ನಡೆಸಲು ಅಗತ್ಯವಿರುವ ಶಕ್ತಿ ಕೊಡುವಂತೆಯೂ ತಾಯಿಯಲ್ಲಿ ಮೊರೆಯಿಟ್ಟಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಅರ್ಚಕರು ವಿಶೇಷ ಪೂಜೆಯನ್ನು ನೆರೆವೇರಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net