ಶೀಘ್ರದಲ್ಲೇ ಡಿಕೆಶಿ ರಾಜ್ಯದ ಸಿಎಂ ಆಗಲಿದ್ದಾರೆ: ವಿಜಯಾನಂದ ಕಾಶಪ್ಪನವರ್

Untitled design - 2023-10-19T201316.662
Published on

ಬೆಳಗಾವಿ: ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ಹೆಸರು ತಂದುಕೊಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಕಾಂಗ್ರೆಸ್​ ಶಾಸಕ ವಿಜಯಾನಂದ ಕಾಶಪ್ಪನವರ್​ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್​, ಇಂದಿನ ಸಮಾರಂಭದಲ್ಲಿ ಇಡೀ ಉತ್ತರ ಕರ್ನಾಟಕ ಭಾಗಕ್ಕೆ ಒಳ್ಳೆಯ ಹೆಸರು ತಂದುಕೊಟ್ಟ ನಮ್ಮ ಆತ್ಮೀಯ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಹೇಳಿದರು.

ಈಗ ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರು ಖಂಡಿತವಾಗಿ ರಾಜ್ಯದ ಸಿಎಂ ಆಗುತ್ತಾರೆ ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, "ಜನರು ತಮ್ಮದೇ ಆದ ಆಶಯಗಳನ್ನು ಹೊಂದಿದ್ದಾರೆ ಮತ್ತು ಉತ್ತಮ ಆಡಳಿತವನ್ನು ನೀಡುವುದು ನಮ್ಮ ಆದ್ಯತೆಯಾಗಿದೆ" ಎಂದು ಹೇಳಿದರು.

"ನಮಗೆ ಐದು ವರ್ಷಗಳ ಕಾಲ ಅಧಿಕಾರ ನೀಡಲಾಗಿದೆ. ಪಕ್ಷದ ನಾಯಕತ್ವವು ಅವರಿಗೆ ಬೇಕಾದಾಗ ನಿರ್ಧರಿಸುತ್ತದೆ. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಜನರಿಗೆ ಅವರದೇ ಆದ ಆಶಯಗಳಿವೆ, ಅದು ಅವರದು. ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ" ಎಂದು ಅಭಿಪ್ರಾಯಿಸಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net