ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಜಯವಾಣಿ ಹೊರತಂದ "ಸಕ್ಕರೆಯ ನಾಡು ಅಕ್ಕರೆಯ ಬೀಡು" ಪುರವಣಿ ಬಿಡುಗಡೆ | Mandya

ವಿಜಯವಾಣಿ - 2024-12-20T165851.462
Published on

Mandya: ಇಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದ್ದು, ಕಾರ್ಯಕ್ರಮವನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.

ಮಂಡ್ಯದಲ್ಲಿ ಇಂದು ಆರಂಭವಾಗಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ 'ವಿಜಯವಾಣಿ' ಪತ್ರಿಕೆ ಹೊರತಂದ 120 ಪುಟಗಳ "ಸಕ್ಕರೆಯ ನಾಡು ಅಕ್ಕರೆಯ ಬೀಡು" ವಿಶೇಷ ಪುರವಣಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿ ಬಿಡುಗಡೆ ಮಾಡಿದರು.

ವಿಶೇಷ ಪುರವಣಿ ಬಿಡುಗಡೆ ಸಮಯದಲ್ಲಿ ಶಾಸಕರಾದ ದಿನೇಶ್ ಗೂಳಿಗೌಡ, ನರೇಂದ್ರ ಸ್ವಾಮಿ, ಮಂಡ್ಯ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತ್ಯಾಗರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net