ವಿಜಯವಾಣಿ, ದಿಗ್ವಿಜಯ ನ್ಯೂಸ್ ಆಯೋಜಿಸಿರುವ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗೆ ಚಾಲನೆ

Drawing Compitation
Published on

ಬೆಂಗಳೂರು: ಪರಿಸರ ದಿನಾಚರಣೆ ಅಂಗವಾಗಿ ಅಖಿಲ ಕರ್ನಾಟಕ ಮಕ್ಕಳ ಕೂಟ ಸಹಯೋಗ ಮತ್ತು ಚಾಮರಾಜಪೇಟೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಕಾರದಲ್ಲಿ ‘ವಿಜಯವಾಣಿ’ ಹಾಗೂ ‘ದಿಗ್ವಿಜಯ ನ್ಯೂಸ್’ ಚಾನಲ್ ವತಿಯಿಂದ ಆಯೋಜಿಸಲಾಗಿರುವ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ.

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮತ್ತು ಕಾಳಜಿ ಬೆಳೆಸುವ ಉದ್ದೇಶದಿಂದ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಶೀರ್ಷಿಕೆ ಅಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಚಾಮರಾಜಪೇಟೆ ಮಕ್ಕಳ ಕೂಟ ಆವರಣದಲ್ಲಿ ಸ್ಪರ್ಧೆ ನಡೆಯುತ್ತಿದೆ. 7ರಿಂದ 16 ವರ್ಷದ ಮಕ್ಕಳು ನೂರಾರು ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಚಿತ್ರಬಿಡಿಸುವ ಸ್ಪರ್ಧೆಗೆ ಅಖಿಲ ಕರ್ನಾಟಕ ಮಕ್ಕಳ ಕೂಟ ಅಧ್ಯಕ್ಷರಾದ ಮೋಹನ್ ದೇವ್ ಆಳ್ವ ಅವರು ಚಾಲನೆ ನೀಡಿದರು. ಚಾಮರಾಜಪೇಟೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಡಾ. ಎ. ಪ್ರಕಾಶ್, ವಿಜಯವಾಣಿ ಸಂಪಾದಕರಾದ ಚನ್ನೇಗೌಡ, ದಿಗ್ವಿಜಯ ನ್ಯೂಸ್ ಸಂಪಾದಕರಾದ ಕೆ.ಎನ್.ಸಿದ್ದು ಕಾಳೋಜಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಮೂರು ವಿಭಾಗದಲ್ಲಿ ಸ್ಪರ್ಧೆ

1. ವಿಭಾಗ-1: 2,3 ಮತ್ತು 4ನೇ ತರಗತಿ ವಿದ್ಯಾರ್ಥಿಗಳು (ಸಬ್ ಜೂನಿಯರ್)

2. ವಿಭಾಗ-2: 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳು (ಜೂನಿಯರ್)

3. ವಿಭಾಗ-3: 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳು (ಸೀನಿಯರ್)

ಬಹುಮಾನ ಏನು?

* ಪ್ರಥಮ- 3,000 ರೂಪಾಯಿ

* ದ್ವಿತೀಯ- 2,000 ರೂಪಾಯಿ

* ತೃತೀಯ- 1,000 ರೂಪಾಯಿ

* ತಲಾ ಒಬ್ಬರಿಗೆ ಸಮಾಧಾನಕರ ಬಹುಮಾನ

* ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರ ವಿತರಣೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net