ದೆಹಲಿಯಲ್ಲಿ ವಿಜಯೇಂದ್ರ; ಕುತೂಹಲ ಕೆರಳಿಸಿದ ರಾಷ್ಟ್ರೀಯ ನಾಯಕರ ಭೇಟಿ!

BY Vijayendra
Published on

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ವಿಳಂಬದ ಬಗ್ಗೆ ಬಿಸಿ ಚರ್ಚೆ ನಡೆಯುತ್ತಿರುವಾಗ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿದ್ದಷ್ಟೇ, ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ, ಇಬ್ಬರೂ ನಾಯಕರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನ ಕುರಿತು ಚರ್ಚಿಸಿದ್ದಾರೆ.

ನಡ್ಡಾ ಅವರನ್ನು ಬುಧವಾರ, ಅಮಿತ್ ಷಾ ಅವರನ್ನು ಗುರುವಾರ ಭೇಟಿಯಾಗಿರುವ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದಾರೆ.

ಸಂಘಟನಾ ಚಾರ್ತುಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಾಯಿತು. ರಾಜ್ಯದಲ್ಲಿ ವೈಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ನಡ್ಡಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಕೋರಲಾಯಿತು. ವಿಧಾನಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವುದು, ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಪಡೆಯಲಾಯಿತು ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net