ವಿಜಯೇಂದ್ರ 150 ಕೋಟಿ ರೂ. ಆಮಿಷ ವಿಚಾರ: ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: CM

by (22)
Published on

ಗದಗ: ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಸಿಬಿಐ ತನಿಖೆ ನಡೆಸುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ(CM) ಹೇಳಿದರು.

ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರ ಭಾನುವಾರ ಮಾತನಾಡಿದ ಸಿಎಂ, ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ಹೀಗಿತ್ತು.

ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ, ವಿಡಿಯೋದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೇ ತಾನೇ ಎಂದು ಸಿಎಂ ಸಿದ್ದು ಪ್ರಶ್ನಿಸಿದರು.

ಸುವರ್ಣಸೌಧದಲ್ಲಿ ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಬಿ.ವೈ.ವಿಜಯೇಂದ್ರ ಸವಾಲ್​

ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವುದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್ ಆಸ್ತಿಗಳ ಕುರಿತೇ ಹೊರತು ಬಿಜೆಪಿಯವರನ್ನು ಕುರಿತು ಅಲ್ಲ, ಕಾಂಗ್ರೆಸಿಗರ ವಿರುದ್ಧ ಇರುವ ಆರೋಪಕ್ಕೆ ಯಾರಾದರೂ ₹150 ಕೋಟಿ ರೂಪಾಯಿಗಳ ಆಮಿಷವನ್ನು ಒಡ್ಡಲು ಸಾಧ್ಯವೇ ? ಎಂಬ ಕನಿಷ್ಠ ವಿವೇಕವೂ ನಿಮಗಿಲ್ಲವಲ್ಲ? ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದರು.

ತಳಬುಡ ವಿಲ್ಲದ ಆರೋಪವನ್ನು ನೀವು ಹಾಗೂ ನಿಮ್ಮ ಸಂಪುಟದ ಸಚಿವ ಪ್ರಿಯಾಂಕ್​ ಅವರು ಸಂಭ್ರಮಿಸುತ್ತಿರುವ ಪರಿ ನಿಮ್ಮ ಬಾಲಿಶತನವನ್ನು ತೋರಿಸುತ್ತಿದೆಯೇ ಹೊರತು ನಿಮ್ಮ ರಾಜಕೀಯ ಜಾಣ್ಮೆಯನ್ನಲ್ಲ, ನಿಮಗೆ ಧೈರ್ಯವಿದ್ದರೆ, ಉಚ್ಛ ನ್ಯಾಯಾಲಯದಲ್ಲಿರುವ ನಿಮ್ಮ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆ ಕೋರಿದ ರಿಟ್ ಅರ್ಜಿಗೆ ಆಕ್ಷೇಪವೆತ್ತದೇ ಸಿಬಿಐ ತನಿಖೆ ನಡೆಯಲು ಅವಕಾಶಮಾಡಿಕೊಡಿ ನೋಡೋಣ? ಎಂದು ವಿಜಯೇಂದ್ರ ಸವಾಲ್​ ಹಾಕಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net