

ಬೆಂಗಳೂರು: ಪಕ್ಷದೊಳಗಿನ ಬೆಳವಣಿಗೆ ಕುರಿತು ಅಸಮಾಧಾನಗೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಐ ವಿಜಯೇಂದ್ರ ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪಕ್ಷದಲ್ಲಿ ಎಲ್ಲರನ್ನೂ ಜತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ. ರಮೇಶ್ ಭೇಟಿ ಮಾಡಿ ಅರ್ಧಗಂಟೆ ಚರ್ಚೆ ಮಾಡಿದ್ದೇನೆ ಎಂದರು.
ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೆಲವು ಸಣ್ಣಪುಟ್ಟ ಅಸಮಾಧಾನಗಳಿದ್ದವು, ಅದರ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದರು.
ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸೋಮಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಹಿರಿಯರು ಏನೇ ಮಾತಾಡಿದರೂ ಆಶೀರ್ವಾದ ಅಂದುಕೊಳ್ಳುವೆ. ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗುತ್ತೇನೆ ಎಂದರು.