ವಿಕಾಸ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

vikas college
ವೃತ್ತಿ ಮಾರ್ಗದರ್ಶನ ಶಿಬಿರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆನರಾ ಹೈಸ್ಕೂಲ್ ಅಸೋಸಿಯೇಶನ್‌ನ ಕೋಶಾಧಿಕಾರಿ ಸಿಎ ಎಂ. ವಾಮನ್ ಕಾಮತ್ ಮಾತನಾಡಿದರು.
Published on

ಮಂಗಳೂರು: ನಗರದ ಮೇರಿಹಿಲ್‌ನ ಕೆನರಾ ವಿಕಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆನರಾ ಹೈಸ್ಕೂಲ್ ಅಸೋಸಿಯೇಶನ್‌ನ ಕೋಶಾಧಿಕಾರಿ ಸಿಎ ಎಂ.ವಾಮನ್ ಕಾಮತ್ ಮಾತನಾಡಿ,‘ ಹಿಂದಿನ ತಲೆಮಾರಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ವೃತ್ತಿಯ ಬಗ್ಗೆ ತಿಳಿದು ಆಯ್ಕೆ ಮಾಡುವ ಅವಕಾಶವಿರಲಿಲ್ಲ. ಈಗಿನ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದ್ದು ಅದನ್ನು ಸದುಪಯೋಗಪಡಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಕೆನರಾ ವಿಕಾಸ ಸಮೂಹ ಸಂಸ್ಥೆಗಳ ಸಂಯೋಜಕ ಪಾರ್ಥಸಾರಥಿ ಪಾಲೆಮಾರ್, ಕೆನರಾ ವಿಕಾಸ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ., ಅಲೆನ್ ಕೆರಿಯರ್ ಸಂಸ್ಥೆಯ ಮಂಗಳೂರು ಕೇಂದ್ರದ ಮುಖ್ಯಸ್ಥ ವಿಪಿನ್ ನಾರಾಯಣನ್ ಉಪಸ್ಥಿತರಿದ್ದರು. ಉಪನ್ಯಾಸಕ ಹನೂಬ್ ಕೆ.ಸಿ ಸ್ವಾಗತಿಸಿದರು. ಅಕ್ಷತಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net