ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಕನ್ನಡ ಭಾಷಾ ಪರೀಕ್ಷೆ: ಪ್ರವೇಶ ಪತ್ರ ಪ್ರಕಟ

kea
Published on

ಬೆಂಗಳೂರು ಕಂದಾಯ ಇಲಾಖೆಯಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಹಾಗೂ ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸೆ.29ರಂದು ನಡೆಯಲಿರುವ ಕನ್ನಡ ಭಾಷಾ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ kea.kar.nic.in

ಭೇಟಿ ನೀಡಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕೆಲವರು ಎರಡೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ್ದು, ಅಂತಹವರಿಗೆ ಎರಡೆರಡು ಪ್ರವೇಶ ಪತ್ರಗಳು ಇರಲಿವೆ. ಅಂತಹವರು ತಮಗೆ ಇಚ್ಛೆ ಇರುವ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದು ಎಂದು ಕೆಇಎ ಸ್ಪಷ್ಟಪಡಿಸಿದೆ.

ಪರೀಕ್ಷೆ ನಂತರ ಎರಡೂ ಪರೀಕ್ಷೆಗಳ ಪ್ರವೇಶಪತ್ರಗಳ ಜೆರಾಕ್ಸ್ ಪ್ರತಿಯನ್ನು ಕೆಇಎಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕು. ಪ್ರತ್ಯೇಕ ಅಧಿಸೂಚನೆಗಳಾದ ಕಾರಣಕ್ಕೆ ಈ ರೀತಿ ಎರಡೆರಡು ಪ್ರವೇಶ ಪತ್ರಗಳನ್ನು ಜನರೇಟ್ ಮಾಡಲಾಗಿದೆ. ಅಭ್ಯರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಪರೀಕ್ಷೆಯು ಸೆ.29ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net