

ಸರಗೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರಗೂರು ತಹಸೀಲ್ದಾರ್ ಕಚೇರಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಶನಿವಾರ ಆರನೇ ದಿನಕ್ಕೆ ಕಾಲಿರಿಸಿತು.
ತಾಲೂಕು ಗ್ರಾಮ ಅಡಳಿತ ಅಧ್ಯಕ್ಷ ಕುಮಾರ್ ಮಾತನಾಡಿ, ಕೆಲಸದ ಸ್ಥಳದಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಕೆಲಸದ ಒತ್ತಡ ತಗ್ಗಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕೆನ್ನುವುದು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಯಾಗಿದೆ. ಆದರೆ, ಸರ್ಕಾರದಿಂದ ಸ್ಪಂದನೆ ಸಿಗದ ಕಾರಣ ಶುಕ್ರವಾರವೂ ಮುಷ್ಕರ ಮುಂದುವರಿಸಿದರು.
ಮೀಸಲು ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಂಶಾವಳಿ, ವೃದ್ಧಾಪ್ಯ ವೇತನ ಸೇರಿದಂತೆ ಒಟ್ಟು 25 ರೀತಿಯ ಪ್ರಮಾಣ ಪತ್ರಗಳನ್ನು ನೀಡುತ್ತೇವೆ. ಸರ್ಕಾರದ ವಿವಿಧ ಸೇವೆಗಳನ್ನುಹೆಚ್ಚಿನ ಕಾರ್ಯಭಾರವಿದ್ದರೂ ದಕ್ಷತೆಯಿಂದ ನಿಭಾಯಿಸುತ್ತಿದ್ದೇವೆ. ಆದರೆ, ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿಯೇ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದರು.
ಅದರಂತೆ ಸದರಿ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿರುತ್ತಾರೆ. ರಾಜ್ಯಾದಂತ ನಮ್ಮ ಬೇಡಿಕೆಯನ್ನು ಸರ್ಕಾರವು ವೃಂದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿವರಗೂ ಮುಷ್ಕರ ನಿಲ್ಲುವುದಿಲ್ಲ ಎಂದು ಆಗ್ರಹಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಮಂಜುನಾಥ, ಪುರುಷೋತ್ತಮ್, ಸತ್ಯನಾರಾಯಣ, ಚೈತ್ರಾ, ಚಂದ್ರ, ನಾಗಪ್ಪ, ಹೇಮಂತ್‌ಕುಮಾರ್, ಉಷಾ, ಸುಚಿತ್ರಾ , ತಾಸ್ಮಿಯಾ, ಚಂದ್ರಶೇಖರ್, ನರಸಿಂಹಶಟ್ಟಿ, ಶ್ರೀಕಾಂತ್ ಭಾಗವಹಿಸಿದ್ದರು.