ಗ್ರಾಮ ಪಂಚಾಯಿತಿ ಸದಸ್ಯನ ಮನೆಗೇ ನುಗ್ಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

Murder 3
Published on

ಕಲಬುರುಗಿ: ಇಲ್ಲಿನ ಕೈಲಾಶ್​ ನಗರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನೋರ್ವನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಮಾಡಲಾಗಿದೆ.

ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದ ವ್ಯಕ್ತಿ. ಇವರು ಆಳಂದ ತಾಲೂಕಿನ ಕಜಗಂಚಿ ಗ್ರಾಮದ ನಿವಾಸಿ. ಕೈಲಾಶ್​ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಇವರ ಮನೆಗೇ ಬಂದ ದುಷ್ಕರ್ಮಿಗಳು, ಶಿವಲಿಂಗಪ್ಪನವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net