ನನ್​ ತಂದೆ ಬಗ್ಗೆ ಕೆಟ್ಟ ಕಾಮೆಂಟ್​ ಮಾಡಿ ನಿಂದಿಸಿದ್ದಕ್ಕೆ ಥ್ಯಾಂಕ್ಸ್​; ಭಾವುಕರಾದ ದರ್ಶನ್​ ಪುತ್ರ ವಿನೀಶ್

Vinish Darshan
Published on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 13ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಪ್ರಕರಣದ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಒಂದಿಲ್ಲೊಂದು ವಿಚಾರ ಹೊರಬರುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್​ ಪುತ್ರ ವಿನೀಶ್​ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಿನೀಶ್​, ನನ್ನ ತಂದೆಯ ಬಗ್ಗೆ ಮಾಡಲಾಗಿರುವ ಎಲ್ಲಾ ಆಕ್ಷೇಪಾರ್ಹ ಕಮೆಂಟ್​ಗಳಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ. ನನಗೂ ಭಾವನೆಗಳಿದೆ ಎಂಬುದನ್ನು ಮರೆತು ಕಮೆಂಟ್​ ಮಾಡಿದ್ದೀರಿ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ಕಷ್ಟದ ಸಮಯದಲ್ಲಿಯೂ ನನ್ನನ್ನು ಶಪಿಸುವುದರಿಂದ ನೀವೆಲ್ಲರೂ ಬದಲಾಗುವುದಿಲ್ಲ ಎಂದು ವಿನೀಶ್​ ದರ್ಶನ್​ ಬರೆದುಕೊಂಡಿದ್ದಾರೆ.

ಇತ್ತ ಪ್ರಕರಣ ದಿನ ಕಳೆದಂತೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಚಿತ್ರದುರ್ಗ ಜಿಲ್ಲೆಯ ಕುರುಬರಹಟ್ಟಿ ನಿವಾಸಿ ರವಿ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಪೊಲೀಸ್​ ಕಸ್ಟಡಿ ಅಂತ್ಯದ ವೇಳೆಗೆ ಪ್ರಕರಣ ಯಾವೆಲ್ಲಾ ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

Vinish Post
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net