

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಮಾಡಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ ಎನ್ನುವ ಹಿನ್ನೆಯೆಲ್ಲಿ ದರ್ಶನ್ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಕಳೆಯುತ್ತಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್ ಹಾಗೂ ಪವಿತ್ರಾ ಅವರಿಗೆ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ನಾಲ್ಕು ಗೋಡೆಗಳ ನಡುವೆ ಕುಗ್ಗಿ ಹೋಗಿದ್ದಾರೆ. ಕಳೆದ ನಾಲ್ಕು ದಿನದಿಂದ ನಟ ದರ್ಶನ್ ವೈರಲ್ ಫೀವರ್ನಿಂದ ಬಳಲುತ್ತಿದ್ದಾರಂತೆ.
ಜೈಲಲ್ಲಿ ದರ್ಶನ್ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಅವರಿಗೆ ಸಣ್ಣದಾಗಿ ಜ್ವರ ಕಾಣಿಸಿಕೊಂಡಿತ್ತು. ಈಗ ಅವರು ಜ್ವರದಿಂದ ಚೇತರಿಕೆ ಕಂಡಿದ್ದಾರೆ. ಮನೆ ಊಟ ಬೇಕು ಎನ್ನುವ ಕೋರಿಕೆಯ ಅರ್ಜಿಯ ವಿಚಾರಣೆ ಮುಂದೂಡಲ್ಪಡುತ್ತಲೇ ಇದೆ. ಇದರಿಂದ ದರ್ಶನ್ ಸಾಕಷ್ಟು ಹಿನ್ನಡೆ ಅನುಭವಿಸುತ್ತಿದ್ದಾರೆ.
ಜೈಲಿನಲ್ಲಿ ನಟ ದರ್ಶನ್ ಕುಗ್ಗಿ ಹೋಗಿದ್ದಾರೆ. ಪ್ರೊಟಿನ್ ಫುಡ್ ಸಿಗದೆ, ಜೈಲೂಟ ತಿನ್ನಲು ಆಗದೆ ಮನೆಯೂಟ ಬೇಕು ಎನ್ನುತ್ತಿದ್ದಾರೆ. ಮನೆ ಊಟಕ್ಕೆ ವ್ಯವಸ್ಥೆ ಮಾಡಿ ಅಂತ ಕುಟುಂಬಸ್ಥರ ಬಳಿ ಕೇಳಿಕೊಂಡಿದ್ದಾರೆ ಎನ್ನಲಾಗ್ತಿದೆ.
ನಟ ದರ್ಶನ್ ಮನೆ ಊಟಕ್ಕೆ ಹಾಕಿದ್ದ ಅರ್ಜಿಗೆ ಪ್ರಾಸಿಕ್ಯೂಷನ್ನಿಂದ ಅಕ್ಷೇಪಣೆ ಸಲ್ಲಿಕೆಯಾಗಿದೆ. ನಟ ದರ್ಶನ್ ಅವರಿಗೆ ದರ್ಶನ್ ನ್ಯಾಯಾಂಗ ಬಂಧನಕ್ಕೆ ಹೋಗುವವರೆಗೂ ಯಾವುದೇ ಅನಾರೋಗ್ಯ ಇರಲಿಲ್ಲ. ಅರ್ಜಿ ಜೊತೆ ಅವರು ಯಾವುದೇ ಕಾಯಿಲೆ ಬಗ್ಗೆ ವೈದ್ಯಕೀಯ ದಾಖಲೆ ಸಲ್ಲಿಸಿಲ್ಲ.
ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ಜೈಲೂಟ ಚೆನ್ನಾಗಿಲ್ಲ ಎಂದು ದರ್ಶನ್ ಆರೋಪ ಮಾಡುತ್ತಿದ್ದಾರೆ. ಆದರೆ, ಇದನ್ನು ಜೈಲು ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.