ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಷ್ಣು ದೇವ ಸಾಯಿ

sai
Published on

ರಾಯಪುರ: ರಾಯಪುರ್​: ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ ಸಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಗಳಾಗಿ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ಛತ್ತೀಸ್​ಗಢದ ರಾಯಪುರದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮೊದಲಾದವರು ಹಲವರು ಉಪಸ್ಥಿತರಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ನಾಯಕ ಮೋಹನ್ ಯಾದವ್, ಉಪಮುಖ್ಯಮಂತ್ರಿಗಳಾಗಿ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಅವರು ಕೂಡ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಏತನ್ಮಧ್ಯೆ, ರಾಜಸ್ಥಾನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಭಜನ್ ಲಾಲ್ ಶರ್ಮಾ ಡಿಸೆಂಬರ್ 15 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net