ಬೆಂಗಳೂರು: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ವತಿಯಿಂದ ಕನ್ನಡ ಭವನದ ಆವರಣದಲ್ಲಿ “ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ”ಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಎ.ಆರ್. ಗೋವಿಂದಸ್ವಾಮಿ, ಜಂಟಿ ನಿರ್ದೇಶಕರುಗಳಾದ ಬನಶಂಕರಿ ಅಂಗಡಿ, ಬಲವಂತರಾವ್ ಪಾಟೀಲ್, ಆಶೋಕ್ ಛಲವಾದಿ, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ. ಕಿರಣ್‍ಸಿಂಗ್, ಲೆಕ್ಕಾಧಿಕಾರಿಯಾದ ಸುರೇಶ್ ನಾಯ್ಕ್ ಬಿ, ಕನ್ನಡ ಸಂಸ್ಕೃತಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಮತ್ತಿತರು ಉಪಸ್ಥಿತರಿದ್ದರು.