

ಮದ್ದೂರು: ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಸಮುದಾಯದಿಂದ ಬುಧವಾರ ವಿಶ್ವಕರ್ಮ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿತ್ತು.
ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಬಳಿಕ ಮಾತನಾಡಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ರೈತರಿಗಾಗಿ ನೇಗಿಲು, ನೋಗ ಸೇರಿದಂತೆ ವಿವಿಧ ಸಲಕರಣೆಗಳನ್ನು ನಿರ್ಮಿಸುವ ಮೂಲಕ ವಿಶ್ವಕರ್ಮರು ರೈತ ಮಿತ್ರರಾಗಿದ್ದಾರೆ. ಮನೆ ನಿರ್ಮಾಣ, ಆಭರಣ ತಯಾರಿಕೆ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮದೇಯಾದ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಕೆ.ಶ್ರೀನಿವಾಸಕುಮಾರ್, ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಟಿ.ಪುಟ್ಟರಾಜು, ಎಂಪಿಸಿಎಸ್ ನಿರ್ದೇಶಕ ಮಂಜು, ಮುಖಂಡರಾದ ಸಿದ್ದರಾಜು, ಮಹಾದೇವ, ಚಿಕ್ಕಣ್ಣಚಾರಿ, ವೆಂಕಟೇಶಾಚಾರಿ, ತಿಮ್ಮೇಗೌಡ, ಅಪ್ಪಾಜಿಗೌಡ, ರಾಮಚಂದ್ರು, ಗೌರಮ್ಮ ಇತರರು ಇದ್ದರು.