ವಿಶ್ವಕರ್ಮ ಹಾಸ್ಟೆಲ್‌ಗೆ ಒಂದು ಕೋಟಿ ರೂ.: ಬಿವೈಆರ್

vishwa
Published on

ಶಿವಮೊಗ್ಗ: ವಿಶ್ವಕರ್ಮ ಸಮಾಜದವರು ಶ್ರಮಿಕರು ಹಾಗೂ ನಂಬಿಕೆಗೆ ಅರ್ಹರು. ಈ ಸಮಾಜದ ಬಹುವರ್ಷಗಳ ಬೇಡಿಕೆ ಈಡೇರುವ ಸಂದರ್ಭ ಒದಗಿ ಬಂದಿದೆ. ನಗರದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ವಿಶ್ವಕರ್ಮ ಸಮಾಜದ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.

ಜಿಲ್ಲಾಡಳಿತದಿಂದ ಶನಿವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಶಿಕಾರಿಪುರದಲ್ಲಿ ವಿಶ್ವಕರ್ಮ ಸಮಾಜದ ಹಾಸ್ಟೆಲ್ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಭದ್ರಾವತಿ ಸೇರಿದಂತೆ ವಿವಿಧೆಡೆ ಈ ಸಮಾಜದವರು ನಿರ್ಮಿಸಿದ ದೇವಾಲಯಗಳಿಗೆ ಹಣ ನೀಡಲಾಗಿದೆ. ಮುಂದಿನ ದಿನಗಳಲ್ಲೂ ಈ ಸಮಾಜದ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎಂದು ಭರವಸೆ ನೀಡಿದರು.

ಭವಿಷ್ಯ ರೂಪಿಸಲು ಇತಿಹಾಸ ಅರಿತುಕೊಳ್ಳುವುದು ಅವಶ್ಯಕ. ಇಂದಿನ ಸಮಾಜ ವಿಶ್ವಕರ್ಮರ ಪ್ರತಿಭೆ, ಸಮಾಜಕ್ಕೆ ಅವರು ನೀಡಿದ ಕೊಡುಗೆ, ಅವರ ಕಲ್ಪನಾಶಕ್ತಿಯ ಬಗ್ಗೆ ಮಾಹಿತಿ ಪಡೆಯುವುದು ಅಗತ್ಯ. ಈಗಲೂ ಸಮಾಜಕ್ಕೆ ವಿಶ್ವಕರ್ಮ ಸಮುದಾಯದವರು ನೀಡುತ್ತಿರುವ ಕೊಡುಗೆ ಅಪಾರವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net