‘ವಿಶ್ವಾಸ್’ ತಂತ್ರಾಂಶದಿಂದ ಮಧ್ಯವರ್ತಿಗಳ ಹಾವಳಿಗೆ ತಡೆ: ಸಚಿವ ಶಿವರಾಜ ತಂಗಡಗಿ

shivaraj tangadagi
ಶಿವರಾಜ ತಂಗಡಗಿ
Published on

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ಬರುವ ನಿಗಮಗಳು ನೀಡುವ ಸಾಲ ಹಾಗೂ ಸಾಲ ಮರುಪಾವತಿಯಲ್ಲಿ ಪಾರದರ್ಶಕತೆ ತರಲು ರೂಪಿಸಲಾಗಿರುವ ‘ವಿಶ್ವಾಸ್’ ತಂತ್ರಾಂಶಕ್ಕೆ ಚಾಲನೆ ನೀಡಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬ್ಯಾಂಕ್ ಆ್ ಬರೋಡದ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ‘ವಿಶ್ವಾಸ್’ ತಂತ್ರಾಂಶ ಹಾಗೂ ಪಿಒಎಸ್ ಸಾಧನಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದಭರ್ಧದಲ್ಲಿ ಮಾತನಾಡಿದ ಅವರು, ಈ ನೂತನ ತಂತ್ರಾಂಶದಿಂದ ನಿಮಗದ ಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ದಲ್ಲಾಳಿಗಳ ಹಾವಳಿ ತಪ್ಪಲಿದೆ. ಪಾರದರ್ಶಕತೆ ಇರಲಿದೆ. ಇಲಾಖೆಗೆ ಯಾವುದೇ ವಂಚನೆ ಮಾಡಲು ಸಾಧ್ಯವಿಲ್ಲ. ಫಲಾನುಭವಿಯಿಂದ ಪಡೆಯಲಾದ ಮರುಪಾವತಿ ಮೊತ್ತವೂ ದುರ್ಬಳಕೆಯಾಗದೆ ನಿಗಮದ ಮರುಪಾವತಿ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ತಿಳಿಸಿದರು.

ಸಾಲ ಮರುಪಾವತಿ ಮಾಡಿಸಿಕೊಳ್ಳುವುದು ಜಿಲ್ಲಾ ಮಟ್ಟದಲ್ಲಿ ಸಮಸ್ಯೆಯಾಗಿತ್ತು. ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬಳಿಕ ಜನರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಎರಡೇ ತಿಂಗಳಲ್ಲಿ ಈ ತಂತ್ರಾಂಶ ಹೊರ ತರಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 12,807 ಕೊಳವೆ ಬಾವಿಗಳನ್ನು ಕೊರೆಸಲು ಗುರಿ ಹೊಂದಲಾಗಿದ್ದು, ಇದಕ್ಕೆ 9064 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ 203.29 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ಕೊಳವೆ ಬಾವಿ ಕೊರೆಸಿದ ವಾರದೊಳಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಫಲಾನುಭವಿಗಳ ಆಯ್ಕೆ ಪಟ್ಟೆಯನ್ನು ಶಾಸಕರು ಒದಗಿಸಲಿದ್ದಾರೆ ಎಂದು ಹೇಳಿದರು.

ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಸೇರಿದಂತೆ ಹಲವು ವಿಶೇಷ ಯೋಜನೆಗಳಿವೆ. ಇಂತಹ ಯೋಜನೆಯನ್ನು ಜನರು ಬಳಸಿಕೊಳ್ಳಬೇಕು ಎಂದರು. ಇದೇ ವೇಳೆ ಅರಿವು ಯೋಜನೆಯ 138 ಫಲಾನುಭವಿಗಳ ಖಾತೆಗೆ ಹಣವನ್ನು ಡಿಬಿಟಿ ಮೂಲಕ ಜಮಾ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net