ವಿವೇಕಾನಂದರು ಯುವಜನತೆಗೆ ಮಾಡಲ್: ಡಿಸಿ ಸೆಲ್ವಮಣಿ

yuva souraba programme innuguration
ಕುವೆಂಪು ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಪುಷ್ಪ ನಮನ ಸಲ್ಲಿಸಿದರು. ಎಸ್.ಪಿ.ದಿನೇಶ್, ಎಚ್.ಉಮೇಶ್, ಡಾ. ನಾಗರಾಜ್ ಪರಿಸರ, ಕೆಟಿಕೆ ಉಲ್ಲಾಸ್, ಎಸ್.ರಾಜಶೇಖರ್, ಡಾ.ಎಂ. ವೆಂಕಟೇಶ್ ಇದ್ದರು.
Published on

ಶಿವಮೊಗ್ಗ: ಯಾವುದೇ ಕೆಲಸವನ್ನು ಬದ್ಧತೆ ಮತ್ತು ಶ್ರದ್ಧೆಯಿಂದ ಮಾಡುವುದೇ ನಾವು ದೇಶಕ್ಕೆ ನೀಡುವ ಕೊಡುಗೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ಯುವ ಸೌರಭ ಕಾರ್ಯಕ್ರಮ ಹಾಗೂ ನೆಹರು ಯುವ ಕೇಂದ್ರದಿಂದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವಜನತೆಯ ಆದರ್ಶಪುರುಷ ಸ್ವಾಮಿ ವಿವೇಕಾನಂದರು. ನಮ್ಮ ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಯುವಜನರಿದ್ದು ಅವರು ದೇಶಕ್ಕೆ ಉತ್ತಮ ಕೊಡುಗೆಯಾಗಿ ರೂಪುಗೊಳ್ಳಬೇಕು. ಚೀನಾ ದೇಶಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿ, ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಂತಹ ದೇಶದಲ್ಲಿ ಯುವಜನತೆಗೆ ಹೆಚ್ಚಿನ ಕೌಶಲಗಳನ್ನು ನೀಡುವ ಮೂಲಕ ಮುಖ್ಯವಾಹಿನಿಗೆ ತರಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಗೆ ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸು ಮಾಡಲು ಎಲ್ಲ ಯುವಜನತೆ ಕೈಜೋಡಿಸಬೇಕು ಎಂದರು.
ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ವಿಶೇಷ ಉಪನ್ಯಾಸ ನೀಡಿದ ಸಾಗರದ ನಿವೃತ್ತ ಪ್ರಾಚಾರ್ಯ ಪ್ರೊ. ಎಚ್.ಬಿ.ಪಂಚಾಕ್ಷರಯ್ಯ, ಸ್ವಾಮಿ ವಿವೇಕಾನಂದರು ಮಹಾಚಿಂತಕ, ದೇಶಭಕ್ತ, ಯುವಜನತೆಯ ಪ್ರೇರಣೆ. ಅವರು ಆಶಾವಾದ, ಸ್ವಾವಲಂಬನೆ ಮತ್ತು ಸಮಾಜ ಬದಲಾವಣೆಗಾಗಿ ವೈಜ್ಞಾನಿಕ ಚಿಂತನೆ ಎಂಬ 3 ತತ್ವಗಳಲ್ಲಿ ನಂಬಿಕೆ ಇಟ್ಟಿದ್ದರು ಎಂದರು.
ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಮಾತನಾಡಿದರು. ಡಿವಿಎಸ್ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್, ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ, ನೆಹರು ಯುವ ಕೇಂದ್ರದ ಯುವ ಅಧಿಕಾರಿ ಕೆಟಿಕೆ ಉಲ್ಲಾಸ್, ಡಿವಿಎಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ರಾಜಶೇಖರ್, ಪ್ರಾಚಾರ್ಯ ಡಾ.ಎಂ. ವೆಂಕಟೇಶ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net