ಒಕ್ಕಲಿಗ ಸಮಾಜ ಅಭಿಪ್ರಾಯದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ: DK ಶಿವಕುಮಾರ್

Untitled design - 2025-09-21T164006.300
Published on

ಬೆಂಗಳೂರು: ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.

ದೆಹಲಿಗೆ ತೆರಳುವ ನಗರದಲ್ಲಿ ಭಾನುವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿಜನಗಣತಿ ಮುಂದೂಡುವ ನಿರ್ಣಯದ ಬಗ್ಗೆ ಕೇಳಿದಾಗ ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು.

ದೆಹಲಿ ಭೇಟಿಯ ಕುರಿತು ಕೇಳಿದಾಗ, "ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ" ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net