ಕೂಲಿಕಾರ್ಮಿಕರಿಗೆ ಮತದಾನದ ಜಾಗೃತಿ

Voting Awareness for Labourers
ಲೋಕಸಭೆ ಹಿನ್ನೆಲೆಯಲ್ಲಿ ನರೇಗಾ ಕೂಲಿಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮತದಾನದ ಜಾಗೃತಿ ಮೂಡಿಸಿ, ಪ್ರತಿಜ್ಞಾವಿಧಿ ಬೋಧಿಸಲಾಯಿತು. ತಹಸೀಲ್ದಾರ್ ಮಂಗಳಾ ಎಂ., ತಾಪಂ ಸಹಾಯಕ ನಿರ್ದೇಶಕ ರಾಮಚಂದ್ರ ಮೇತ್ರಿ ಇತರರಿದ್ದರು.
Published on

ಗುಳೇದಗುಡ್ಡ: ದೇಶದ ಉತ್ತಮ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಮರುಳಾಗಬಾರದು ಎಂದು ತಾಪಂ ಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾರ್ಜುನ ಬಡಿಗೇರ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬುಧವಾರ ತಾಲೂಕಿನ ಕಟಗೇರಿ ಗ್ರಾಪಂ ವ್ಯಾಪ್ತಿಯ ನಾಲಾ ಹೂಳೆತ್ತುವ ಕಾಮಗಾರಿ, ಕೋಟೆಕಲ್ಲ ಗ್ರಾಪಂ ವ್ಯಾಪ್ತಿಯ ತೋಗುಣಶಿ ಗ್ರಾಮದ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ, ಕೆಂದೂರ ಕೆರೆಯಲ್ಲಿ ಮಂಗಳಗುಡ್ಡ ಮತ್ತು ಹಳದೂರ ಗ್ರಾಪಂ ಕೂಲಿಕಾರ್ಮಿಕರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ನಡೆಸಿ ಕೂಲಿಕಾರ್ಮಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.

ನರೇಗಾ ಕೂಲಿಕಾರ್ಮಿಕರ ಕೂಲಿ ಮೊತ್ತವನ್ನು ಸರ್ಕಾರ 349ರೂಗೆ ಹೆಚ್ಚಿಸಿರುವುದಾಗಿ ತಿಳಿಸಿದರು. ಮತದಾನ ಜಾಗೃತಿ ಕರ ಪತ್ರ ಹಂಚಲಾಯಿತು. ತಹಸೀಲ್ದಾರ್ ಮಂಗಳಾ ಎಂ., ತಾಪಂ ಸಹಾಯಕ ನಿರ್ದೇಶಕ ರಾಮಚಂದ್ರ ಮೇತ್ರಿ, ಪಿಡಿಒ ಆರತಿ ಕ್ಷತ್ರಿ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net