ಬೆಗ್ಲಿ ಬೆಣಜೇನಹಳ್ಳಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

Screenshot_20240426_133048_Gallery
Published on

ಕೋಲಾರ: ಮದ್ಯದ ಅಂಗಡಿ ಲೈಸನ್ಸ್ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಬೆಗ್ಲಿ ಬೆಣಜೇನಹಳ್ಳಿ ಗ್ರಾಮಸ್ಥರು ಶುಕ್ರವಾರ ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಎಂಎಸ್ಐಲ್ ಮದ್ಯದಂಗಡಿ ಮುಚ್ಷಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದ ಪ್ರವೇಶದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು ಕುಡಿದು ಬರುತ್ತಾರೆ. ವಿದ್ಯಾರ್ಥಿಗಳು, ಮಹಿಳೆಯರು ಆ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮದ್ಯದಂಗಡಿ ಮುಚ್ಚಿಸುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಕೋಲಾರ ಗ್ರಾಮಾಂತರ ಇನ್ ಸ್ಪೆಕ್ಟರ್ ಕಾಂತರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.

ಮೊದಲು ಮತ ಹಾಕುವಂತೆ ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಲು ಪಟ್ಟ ಪ್ರಯತ್ನ ವಿಫಲವಾಯಿತು. ಮಧ್ಯಾಹ್ನ 1ಗಂಟೆಯಾದರು ಗ್ರಾಮಸ್ಥರು ಮತದಾನಕ್ಕೆ ಮುಂದಾಗಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net