ಮಧ್ಯಾಹ್ನದ ನಂತರ ಮತದಾನ ಚುರುಕು

hhr voting
ಹೊಳೆಹೊನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಬೂತ್ 166 ರಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
Published on

ಹೊಳೆಹೊನ್ನೂರು: ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯಿತು. ಹೊಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ 90 ಮತಗಟ್ಟೆಗಳ ಪೈಕಿ 16 ಸೂಕ್ಷ್ಮ, 6 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ನಿಂಬೆಗೊಂದಿಯಲ್ಲಿ ಯುವಜನ ನಿರ್ವಹಣೆ ಮತಗಟ್ಟೆ ಸ್ಥಾಪಿಸಲಾಗಿತ್ತು. ಮತ ಕೇಂದ್ರಗಳ ಮುಂಭಾಗ ಶಾಮಿಯಾನ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಪಪಂ ವ್ಯಾಪ್ತಿಯ ಮತದಾರರು ಬೆಳಗ್ಗೆ 11 ಗಂಟೆಯ ಒಳಗೆ ಮತ ಹಾಕಿ ಮನೆ ಸೇರಿದರು. ಹಳ್ಳಿಗಳಲ್ಲಿ ಮಧ್ಯಾಹ್ನದ ನಂತರ ಮತದಾನ ಚುರುಕುಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net