ಮತದಾರರಲ್ಲಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ

NRP MEETING
ಎನ್.ಅರ್.ಪುರ ತಾಪಂ ಸಾಮರ್ಥ್ಯಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಎಚ್.ಡಿ.ನವೀನ್‌ಕುಮಾರ್, ಎಂ.ಎಸ್.ರಮೇಶ ಇತರರಿದ್ದರು.
Published on

ಎನ್.ಆರ್.ಪುರ: ಮತದಾರರ ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ಇಲಾಖೆ ಅಧಿಕಾರಿಗಳು ಕೈ ಜೋಡಿಸಬೇಕೆಂದು ತಾಪಂ ಇಒ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಎಚ್.ಡಿ.ನವೀನ್‌ಕುಮಾರ್ ತಿಳಿಸಿದರು.
ಮಂಗಳವಾರ ತಾಪಂ ಸಾಮರ್ಥ್ಯ ಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮಾ.27ರಂದು ನಡೆಯಲಿರುವ ಮತದಾರರ ಜಾಗೃತಿ ಜಾಥಾ ಅಂಗವಾಗಿ ತಾಲೂಕಿನ ಬಿ.ಎಚ್.ಕೈಮರದಿಂದ ಗುರುಭವನದವರೆಗೆ ಬೈಕ್ ರ‌್ಯಾಲಿ ಆಯೋಜಿಸಲಾಗಿದೆ. ಮಾರ್ಗ ಮಧ್ಯೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ನಂತರ ಗುರುಭವನದಲ್ಲಿ ಮತದಾನ ಅರಿವು ಮೂಡಿಸುವ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು. ರ‌್ಯಾಲಿಯಲ್ಲಿ 100ಕ್ಕೂ ಅಧಿಕ ಬೈಕ್ ಹಾಗೂ ಇಲಾಖಾ ವಾಹನಗಳು ಇರಲಿವೆ. ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಸೀಶಕ್ತಿ ಸ್ವಹಾಯ ಸಂಘದ ಸದಸ್ಯರು, ವಿವಿಧ ಇಲಾಖೆಯ ಮಹಿಳಾ ಸಿಬ್ಬಂದಿ ಕೂಡ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದರು. ಸಭೆಯಲ್ಲಿ ತಹಸೀಲ್ದಾರ್ ಎಂ.ಎಸ್.ರಮೇಶ, ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net