Radhakrishnan Resigns | ಸಿಪಿ ರಾಧಾಕೃಷ್ಣನ್ ರಾಜೀನಾಮೆ!; ಅಧಿಕಾರ ವಹಿಸಿಕೊಳ್ಳುವಂತೆ ಗುಜರಾತ್​​ ರಾಜ್ಯಪಾಲರಿಗೆ ಸೂಚನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Radhakrishnan Resigns
Published on: 

Radhakrishnan Resigns: ದೇಶದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದ ಸಿಪಿ ರಾಧಾಕೃಷ್ಣನ್, ಗುರುವಾರ (ಸೆಪ್ಟೆಂಬರ್​ 11) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು, ಗುಜರಾತ್ ರಾಜ್ಯಪಾಲರಾಗಿರುವ ಆಚಾರ್ಯ ದೇವವ್ರತ್ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರ ರಾಜ್ಯಪಾಲರ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮಂಗಳವಾರ ನಡೆದ ಉಪಾಧ್ಯಕ್ಷ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರನ್ನು 152 ಮತಗಳ ಅಂತರದಿಂದ ಸೋಲಿಸಿದರು. ಜುಲೈ 21 ರಂದು ಹಿಂದಿನ ಉಪಾಧ್ಯಕ್ಷ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದ ಚುನಾವಣೆ ನಡೆಸುವುದು ಅನಿವಾರ್ಯವಾಗಿತ್ತು.

ಯಾರು ಈ ಆಚಾರ್ಯ ದೇವವ್ರತ ?

ಪ್ರಸ್ತುತ ಗುಜರಾತ್ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ದೇವವ್ರತ್, ಇದಕ್ಕೂ ಮುನ್ನ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತಿಹಾಸ ಮತ್ತು ಹಿಂದಿಯಲ್ಲಿ ಸ್ನಾತಕೋತ್ತರ ಪದವಿ, ಯೋಗ ವಿಜ್ಞಾನದಲ್ಲಿ ಡಿಪ್ಲೊಮಾ ಪಡೆದಿದ್ದಾರೆ ಎಂದು ರಾಷ್ಟ್ರೀಯ ಪೋರ್ಟಲ್ ಆಫ್ ಇಂಡಿಯಾದಲ್ಲಿ ಲಭ್ಯವಿರುವ ಮಾಹಿತಿಯಿಂದ ತಿಳಿದುಬಂದಿದೆ. ಇದಷ್ಟೆ ಅಲ್ಲದೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿಯೂ ಅವರು ಪರಿಣಿತಿ ಹೊಂದಿದ್ದಾರೆ.

ಪ್ರಸ್ತುತ, ದೇವವ್ರತ್ ಅವರು ಗುಜರಾತ್ ವಿಶ್ವವಿದ್ಯಾಲಯ, ಹೇಮಚಂದ್ರಾಚಾರ್ಯ ಉತ್ತರ ಗುಜರಾತ್ ವಿಶ್ವವಿದ್ಯಾಲಯ, ಸರ್ದಾರ್ ಪಟೇಲ್ ವಿಶ್ವವಿದ್ಯಾಲಯ, ಸೌರಾಷ್ಟ್ರ ವಿಶ್ವವಿದ್ಯಾಲಯ, ಗುಜರಾತ್ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಇನ್ನೂ ಅನೇಕ ವಿಶ್ವವಿದ್ಯಾಲಯಗಳ ಕುಲಪತಿಗಳಾಗಿ ಸೇವೆ ಸಲ್ಲಿಸುವುದು ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ.(ಏಜೆನ್ಸೀಸ್​​)