ವೃಷಭಾರೂಢಾ ತ್ರಿಮೂರ್ತಿ ಅಲಂಕಾರ

hornadu
ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಿಗೆ ವೃಷಭಾರೂಢಾ ತ್ರೀಮೂರ್ತಿ ಅಲಂಕಾರ ಮಾಡಿ ಪೂಜಿಸಲಾಯಿತು.
Published on

ಕಳಸ: ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಿ ಭಾನುವಾರ ವೃಷಭಾರೂಢಾ ತ್ರಿಮೂರ್ತಿ ಅಲಂಕಾರದೊಂದಿಗೆ ಕಂಗೊಳಿಸಿದಳು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಪ್ತಶತಿ ಪಾರಾಯಣ, ವೇದ ಪಾರಾಯಣ, ಸುಂದರಕಾಂಡ ಪಾರಾಯಣ, ಕುಂಕುಮಾರ್ಚನೆ ಮತ್ತು ಶ್ರೀ ದುರ್ಗಾ ಮೂಲಮಂತ್ರ ಹೋಮ ನಡೆಯಿತು.
ಬೆಳಗ್ಗೆ 8.30ಕ್ಕೆ ನಡೆದ ಪೂರ್ಣಾಹುತಿಯಲ್ಲಿ ದೇವಸ್ಥಾನದ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಪಾಲ್ಗೊಂಡರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಮೃದಂಗ ವಿದ್ವಾನ್ ಎಚ್.ಎಲ್.ಶಿವಶಂಕರ ಸ್ವಾಮಿ ಮತ್ತು ತಂಡ ಮೈಸೂರು ಇವರಿಂದ ಶಾಸೀಯ ಸಂಗೀತ, ನಾಟ್ಯಶ್ರೀ ಕಲಾ ತಂಡ ಶಿವಮೊಗ್ಗ ಇವರಿಂದ ಯಕ್ಷಗಾನ ನಡೆಯಿತು.
ಸೋಮವಾರ ಸಿಂಹಾರೂಢಾ ಸಿದ್ಧಿಧಾತ್ರಿ ಅಲಂಕಾರ ಪೂಜೆ, ಶ್ರೀ ಚಂಡಿಕಾ ಮೂಲಮಂತ್ರಹೋಮ ಹಾಗೂ ಆಯುಧ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಭರತನಾಟ್ಯ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net